ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಂಬಂಧಿಸಿದ ನಕಲಿ ವೀಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ (Congress) ಕಾರ್ಯಕರ್ತ ಹಾಗೂ ಸ್ಪಿರಿಟ್ ಆಫ್ ಕಾಂಗ್ರೆಸ್‌ನ ಸೋಷಿಯಲ್ ಮೀಡಿಯಾ ಖಾತೆ ನಿರ್ವಹಿಸುತ್ತಿರುವ ಅರುಣ್ ರೆಡ್ಡಿ ಎಂಬಾತ ಬಂಧನಕ್ಕೊಳಗಾಗಿದ್ದಾನೆ.
ಯಾವುದೇ ಮಾಹಿತಿ ಅಥವಾ ಎಫ್‌ಐಆರ್ ಅನ್ನು ಬಹಿರಂಗಪಡಿಸದೆ ದೆಹಲಿ ಪೊಲೀಸರು, ಅರುಣ್ ರೆಡ್ಡಿಯನ್ನು (Arun Reddy) ಬಂಧಿಸಿ 24 ಗಂಟೆಗಳ ಕಾಲ ಕಳೆದಿದೆ ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಶುಕ್ರವಾರ ಆರೋಪಿಸಿದ್ದಾರೆ. ಇದನ್ನೂ ಓದಿ: ರೋಹಿತ್ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ
ಅರುಣ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇವೆ. ಆಡಳಿತದ ಈ ನಿರಂಕುಶ ಅಧಿಕಾರ ದುರುಪಯೋಗ ಖಂಡನೀಯ ಎಂದು ಟ್ಯಾಗೋರ್ ತಿಳಿಸಿದ್ದಾರೆ. ಅಮಿತ್ ಶಾ ಅವರ ಡಾಕ್ಟರೇಟ್ ವೀಡಿಯೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಮೇ 1 ರಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೆಲಂಗಾಣ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಿಸುವವರನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ
ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರತಿ ವ್ಯಕ್ತಿಯು ತಲಾ 10,000 ರೂ. ಮೌಲ್ಯದ ಎರಡು ಶ್ಯೂರಿಟಿಗಳನ್ನು ಸಲ್ಲಿಸಬೇಕು. ಮುಂದಿನ ಆದೇಶದ ವರೆಗೆ ಸೋಮವಾರ ಮತ್ತು ಶುಕ್ರವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿತು.
ತೆಲಂಗಾಣ ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಅಮಿತ್ ಶಾ ಅವರ ಚುನಾವಣಾ ಪ್ರಚಾರ ಮತ್ತು ಸಾರ್ವಜನಿಕ ಸಭೆಯಲ್ಲಿ ಮಾಡಿದ ಭಾಷಣದ ಮಾರ್ಫ್ ಮಾಡಿದ ವೀಡಿಯೋವನ್ನು ಪೋಸ್ಟ್ ಮಾಡಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕ ದೂರು ನೀಡಿದ್ದರು. ಸೆಕ್ಷನ್ 469 (ನಕಲಿ), 505 (1) ಸಿ (ವದಂತಿಯನ್ನು ಹರಡುವುದು), 171 ಜಿ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.