ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಬಿಜೆಪಿ (BJP) ಕೋರ್ ಕಮಿಟಿಯಲ್ಲಿ ಇಲ್ಲ. ಅವರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಬೆಲ್ಲದ್ ಮತ್ತು ಯತ್ನಾಳ್ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ನಾವು ಯತ್ನಾಳ್‍ಗೆ ನೋಟಿಸ್ ಜಾರಿ ಮಾಡಿ ಉತ್ತರ ಪಡೆದಿದ್ದೇವೆ. ಯತ್ನಾಳ್ ಸ್ವಭಾವವೇ ಹಾಗಿದೆ ಏನೂ ಮಾಡಲು ಆಗಲ್ಲ. ನೋಡೋಣ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಶೆಟ್ಟರ್ ಅವರನ್ನು ಪಕ್ಷ ಸೈಡ್‍ಲೈನ್ ಮಾಡಿಲ್ಲ. ಅವರು ಕೋರ್ ಕಮಿಟಿಯಲ್ಲಿದ್ದಾರೆ ಅವರಿಗೂ ಟಿಕೆಟ್ ಸಿಗಲಿದೆ ಎಂದು ಭರವಸೆ ನೀಡಿದರು.
Advertisement
Advertisement
ರಾಜ್ಯದಲ್ಲಿ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. 150 ಸೀಟುಗಳೊಂದಿಗೆ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಶಕ್ತಿಯೊಂದಿಗೆ ರಾಜ್ಯದ ಪ್ರತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಸಂಕಲ್ಪ ಮಾಡಿದ್ದಾರೆ. ದೇಶದ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಕಚ್ಚಾಡುವ ಸರ್ಕಾರ ನಡೆಸುತ್ತಿದೆ. ದೇಶದಲ್ಲಿ ಬಿಜೆಪಿಯಿಂದ ಪುನಃ ಸರ್ಕಾರ ರಚಿಸುವ ಟ್ರೆಂಡ್ ನಡೆಯುತ್ತಿದೆ. ಬಿಜೆಪಿ ಎಸ್‍ಸಿ, ಎಸ್‍ಟಿ ಕಲ್ಯಾಣಕ್ಕೆ ಸಮರ್ಪಿತವಾಗಿ ಕೆಲಸ ಮಾಡುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಕೊಡುವಂತಹದ್ದು ಕಾಂಗ್ರೆಸ್‍ನವರು ಏನು ಮಾಡಿದ್ದಾರೆ? ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಏನು ಮಾಡಿದ್ದಾರೆ? ಇದಕ್ಕೆಲ್ಲಾ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆಶಿ ಉತ್ತರ ಕೊಡಲಿ ಎಂದ ಸವಾಲು ಹಾಕಿದ ಅವರು, ಕಾಂಗ್ರೆಸ್ ಪಕ್ಷ ಎಸ್‍ಸಿ, ಎಸ್‍ಟಿ ಸಮಾಜವನ್ನು ಭ್ರಮೆಯಲ್ಲಿಟ್ಟಿದೆ. ಕಾಂಗ್ರೆಸ್‍ನವರು (Congress) ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಎಸ್‍ಸಿ, ಎಸ್‍ಟಿ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿ ನೈಜ ಕಾಳಜಿ ಪ್ರದರ್ಶಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ
ರಾಹುಲ್ ಗಾಂಧಿ ನೇತೃತ್ವದ್ದು ಭಾರತ್ ಜೋಡೋ ಯಾತ್ರೆ ಅಲ್ಲ. ಇದು ಕಾಂಗ್ರೆಸ್ ನಾಯಕರ ಜೋಡೋ ಯಾತ್ರೆಯಾಗಿದೆ. ಕಾಂಗ್ರೆಸ್‍ನ ಪಾದಯಾತ್ರೆ ಕೇವಲ ಡಿಕೆಶಿ ಮತ್ತು ಸಿದ್ದರಾಮಯ್ಯನವರನ್ನು ಜೋಡಿಸುವ ಯಾತ್ರೆಯಾಗಿದೆ. ರಾಹುಲ್ ಗಾಂಧಿ ಇಬ್ಬರನ್ನೂ ಬಲವಂತವಾಗಿ ಕೂಡಿಸಲು ಹೊರಟಿದ್ದಾರೆ. ಆದರೆ ಡಿಕೆಶಿ ಮತ್ತು ಸಿದ್ದರಾಮಯ್ಯ ಪರಸ್ಪರ ಐದು ನಿಮಿಷ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಲ್ಲ. ಪರಸ್ಪರ ಕಚ್ಚಾಟ ಮಾಡಿಕೊಂಡಿದ್ದಾರೆ. ಇದರಿಂದಾಗಿ ಭಾರತ್ ಜೋಡೋ ಯಾತ್ರೆ ಪ್ಲಾಪ್ ಆಗಿದೆ. ಬದಲಾಗಿ ಭಾರತ್ ಜೋಡೋ ದಿಂದ ರಾಹುಲ್ ಗಾಂಧಿಗೆ ಮುಂಜಾನೆ ಸಂಜೆ ವಾಕಿಂಗ್ ಆಗುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ – ಹಿಂದೂಗಳ ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್