ಹಾವೇರಿ: ರಾಹುಲ್ ಗಾಂಧಿಯವರಿಗೆ (Rahul Gandhi) ಯಾವುದೇ ದೂರದೃಷ್ಟಿ ಇಲ್ಲ. ಅವರು, ನೋಡಿಕೊಂಡು ಓದೋದನ್ನು ಬಿಟ್ಟು ಸ್ವಂತವಾಗಿ ಮಾತನಾಡಲಿ ಎಂದು ಬಿಜೆಪಿ (BJP) ಉಸ್ತುವಾರಿ ಅರುಣ್ ಸಿಂಗ್ (Arun Singh) ತಿಳಿಸಿದರು.
ಹಾವೇರಿ (Haveri) ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಾಸೂರು ಪಟ್ಟಣದಲ್ಲಿ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ರಾಹುಲ್ ಗಾಂಧಿ ಬರೆದುಕೊಟ್ಟ ಭಾಷಣವನ್ನು ಓದುತ್ತಾರೆ. ರಾಹುಲ್ ಗಾಂಧಿ ಮೂವತ್ತು ದಿನಗಳ ಕಾಲ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿಯನ್ನು ನಾಯಕ ಎಂದು ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಮ್ಮ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ರಾಜ್ಯದಲ್ಲಿ 2013ರ ಕಾಂಗ್ರೆಸ್ ಇತಿಹಾಸ ಮರುಕಳಿಸಲಿದೆ ಅನ್ನೋದು ಸುಳ್ಳು. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಿದೆ. 2023ರ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು. ಇದನ್ನೂ ಓದಿ: ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು – ಜೋ ಬೈಡೆನ್
ಹಳ್ಳಿ ಹಳ್ಳಿಗಳಲ್ಲಿ ಸಮಾಜ ಜಾಗೃತಿ, ಸಮಾನತೆಯ ಸಂದೇಶ ಸಾರಿದ ಸರ್ವಜ್ಞನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ನನ್ನ ಸೌಭಾಗ್ಯ ಎಂದು ಇದೇ ವೇಳೆ ನುಡಿದರು. ಇದನ್ನೂ ಓದಿ: ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ