ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ (Jayamruthyunjaya Swamiji) ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡುವಾಗ ಗಂಭೀರ ಆರೋಪ ಮಾಡಿರುವ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ
ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ. ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ.
ಊಟದಲ್ಲಿ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ. ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಸಮಾಜ ನೋಡುತ್ತಿದೆ. ಅವರು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ