ಧಾರವಾಡ: (Dharwad) ಅಪಘಾತದಲ್ಲಿ ಗಾಯಗೊಂಡಿದ್ದ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ (Arvind Bellad) ಅವರ ಚಿಕ್ಕಪ್ಪ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರ ಸಹೋದರರೂ ಆಗಿದ್ದ ಶಿವಣ್ಣ ಬೆಲ್ಲದ ಅವರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯ ಪ್ರವಾಸದಲ್ಲಿದ್ರೂ ಯಾವ ನಾಯಕರಿಗೂ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ!
ಧಾರವಾಡದ ಎಸ್‌ಪಿ ಕಚೇರಿ ಬಳಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಬೆಲ್ಲದ ಅವರು ತೀವ್ರವಾಗಿ ಗಾಯಗೊಂಡಿದ್ದರು. ನಿನ್ನೆ ರಾತ್ರಿಯೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಶಿವಣ್ಣ ಬೆಲ್ಲದ ಅವರು ನಿಧನರಾಗಿದ್ದಾರೆ.
ಶಿವಣ್ಣ ಬೆಲ್ಲದ ಅವರು ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಈ ಹಿಂದೆ ಸಹೋದರರಾದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ವಿರುದ್ಧ ಇವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಇದನ್ನೂ ಓದಿ: ಮತ್ತದೇ ಎಡವಟ್ಟು – ಗುಜಿರಿ BMTC ಬಸ್‍ಗಳಿಗೆ CCTV ಭಾಗ್ಯ