ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ ಮಾಡಿಕೊಂಡು ವಿಪಕ್ಷ ಉಪನಾಯಕ ಹಾಗೂ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ (Arvind Bellad) ಅವರು ಪ್ರಧಾನಿ ಮೋದಿಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ನೋವನ್ನು ಪತ್ರದ ಮೂಲಕ ಪ್ರಧಾನಿ ಮತ್ತು ರಾಜ್ಯಪಾಲರಿಗೆ ಗಮನಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ಲಕ್ಷಾಂತರ ಯುವಕರು ಹತಾಶೆಯಿಂದ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಪ ಕಾಣುತ್ತಿದೆ. ನಾವು ಉದ್ಯೋಗಾಕಾಂಕ್ಷಿಗಳ ಬೇಡಿಕೆಗಾಗಿ ಅವರ ಜೊತೆ ನಿಂತು ಬೆಂಬಲಿಸಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್
ರಾಜ್ಯ ಸರ್ಕಾರ ಸಮರ್ಪಕ ಉತ್ತರ ನೀಡದೇ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದೆ.. ರಾಜ್ಯದಲ್ಲಿ ಆಡಳಿತ ನಿಭಾಯಿಸಲು ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಆಡಳಿತ ನಿಭಾಯಿಸಲು ಸರ್ಕಾರ ವಿಫಲವಾಗಿದೆ. ಯುವಕರ ಪರಿಶ್ರಮಕ್ಕೆ ಫಲ ಸಿಗಬೇಕು, ಅವರ ಅನ್ಯಾಯ ನೋಡುತ್ತಾ ನಾವು ಸುಮ್ಮನಿರಲ್ಲ ಎಂದು ಬರೆದುಕೊಂಡಿದ್ದಾರೆ.
ಅರವಿಂದ ಬೆಲ್ಲದ ಅವರು ಪ್ರಧಾನಿ ಮೋದಿಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದ ಬಳಿಕ ರಾಜ್ಯ ಸರ್ಕಾರ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ತೀರ್ಮಾನಿಸಿದೆ.ಇದನ್ನೂ ಓದಿ: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

