ನವದೆಹಲಿ: ಪಂಜಾಬ್ (Punjab), ಚಂಡೀಗಢದಲ್ಲಿ (Chandigarh) ಇಂಡಿಯಾ ಒಕ್ಕೂಟದೊಂದಿಗೆ (INDIA Bloc) ಯಾವುದೇ ಮೈತ್ರಿ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ. ಎಎಪಿ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.
ಈ ಘೋಷಣೆಯಿಂದ ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಆಮ್ ಆದ್ಮಿ ಪಕ್ಷವು ಮಹಾಮೈತ್ರಿಯನ್ನು ತೊರೆದಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಈ ಸಂಬಂಧ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿ: ಅಮಿತ್ ಶಾ ಘೋಷಣೆ
Advertisement
Advertisement
ಇಂಡಿಯಾ ಒಕ್ಕೂಟ ತೊರೆಯಲು ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಸಿದ್ಧರಾಗಿದ್ದಾರೆ. ಮಾಜಿ ಪ್ರಧಾನಿ ಚರಣ್ ಸಿಂಗ್ ಅವರಿಗೆ ‘ಭಾರತ ರತ್ನ’ ಮರಣೋತ್ತರ ಪ್ರಶಸ್ತಿ ಘೋಷಿಸಿದ ಬಳಿಕ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ.
Advertisement
Advertisement
ಈ ಮೊದಲು ನಿತೀಶ್ ಕುಮಾರ್ ಮೈತ್ರಿ ತೊರೆದು ಎನ್‌ಡಿಎ ಒಕ್ಕೂಟ ಸೇರಿದ್ದರು. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡ ಮೈತ್ರಿಕೂಟದಿಂದ ಹೊರಬಂದಿದ್ದರು. ಇದನ್ನೂ ಓದಿ: ಮೋದಿಯವರ 10 ವರ್ಷ ರಾಜ್ಯಕ್ಕೆ ಅನ್ಯಾಯದ ಕಾಲ: ಸಿದ್ದರಾಮಯ್ಯ