ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.
ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ. ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್ ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು, ಈ ಹಿನ್ನೆಲೆ ಜೂನ್ 1 ರ ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಇದನ್ನೂ ಓದಿ: ಪಾಕ್ ಸಹ ಅಣುಬಾಂಬ್ ಹೊಂದಿದೆ, ಕೆರಳಿಸಿದ್ರೆ ಭಾರತದ ಮೇಲೆ ಎಸೆಯುತ್ತಾರೆ: ಕಾಂಗ್ರೆಸ್ ಮಾಜಿ ಸಚಿವ ಪ್ರಚೋದನಕಾರಿ ಹೇಳಿಕೆ!
ಕೇಜ್ರಿವಾಲ್ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಇಡಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು. ಅಫಿಡೆವಿಟ್‌ನಲ್ಲಿ ಚುನಾವಣಾ ಪ್ರಚಾರದ ಹಕ್ಕು ‘ಮೂಲಭೂತ ಹಕ್ಕಲ್ಲ’ ಎಂದು ಹೇಳಿತ್ತು.
ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ
ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡೆವಿಟ್‌ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಹೇಳಿತ್ತು.