ನವದೆಹಲಿ: ರಾಜಕೀಯ ಬದ್ಧವೈರಿ ಅಂತಲೇ ಕರೆಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಗೆ ಪ್ರಮಾಣದ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡುವ ಮೂಲಕ ಅರವಿಂದ್ ಕೇಜ್ರಿವಾಲ್ ಕುತೂಹಲ ಮೂಡಿಸಿದ್ದಾರೆ.
ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿ ಹೃದಯ ಭಾಗದಲ್ಲಿರುವ ರಾಮಲೀಲಾ ಮೈದಾನದಲ್ಲಿ ಸರಳ ಕಾರ್ಯಕ್ರಮ ಆಯೋಜಿಸಿದ್ದು ದೆಹಲಿಯ ಎಲ್ಲ ನಾಗರಿಕರಿಗೆ ಆಹ್ವಾನ ನೀಡಿದೆ.
ಇತರೆ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಅನೇಕ ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗುತ್ತೆ ಎನ್ನಲಾಗಿತ್ತು. ಆದರೆ ಯಾವುದೇ ರಾಜ್ಯದ ನಾಯಕರಿಗೆ ಆಹ್ವಾನ ನೀಡುತ್ತಿಲ್ಲ ಎಂದು ಆಮ್ ಅದ್ಮಿ ಸ್ಪಷ್ಟನೆ ನೀಡಿದೆ.
ಇದಾದ ಬಳಿಕ ಇಂದು ಏಕಾಏಕಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಅದ್ಮಿ ರಾಜಕೀಯ ಬದ್ಧವೈರಿ ಅಂತಲೇ ಕರೆಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯೆ ನಿಡಿಲ್ಲ.