ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹಾಗೂ ಬಿಆರ್‌ಎಸ್ ನಾಯಕಿ ಕೆ.ಕವಿತಾ (K.Kavitha) ಅವರಿಗೆ ಜೈಲೇ ಗತಿಯಾಗಿದೆ. ಇಬ್ಬರ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ವರೆಗೆ ವಿಸ್ತರಣೆಯಾಗಿದೆ.
ಹೊಸ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧಿಸಲಾದ ವಿಪಕ್ಷಗಳ ನಾಯಕರಿಗೆ 14 ದಿನಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಿಸಲಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಮತ್ತು ಕವಿತಾರನ್ನು ಮುಂದಿನ ಮೇ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ
ದೆಹಲಿ ಸಿಎಂ ಅವರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಮಾ.21 ಇಡಿ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಏ.15 ರಂದು ಅರ್ಜಿ ವಿಚಾರಣೆ ನಡೆಸಿತ್ತು. ಆದರೆ ಕೇಜ್ರಿವಾಲ್‌ಗೆ ತಕ್ಷಣ ಜೈಲಿನಿಂದ ಮುಕ್ತಿ ನೀಡಲು ನಿರಾಕರಿಸಿತು.
ಆದರೆ ಕೇಜ್ರಿವಾಲ್ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮೊದಲು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್ ಫಿಕ್ಸಿಂಗ್ʼ ಎಂದ ಕಾಂಗ್ರೆಸ್
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆಯು ಮೇ 2 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವಾಜಾ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಇಡಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಾಗಲೇ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು.