LatestMain PostNational

ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

ನವದೆಹಲಿ: ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರವಾಗಿದೆ. ಇದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶಕ್ಕೂ ಸಿಗಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಮಾದರಿ ಎಂದರೆ ಪ್ರಾಮಾಣಿಕ ಸರ್ಕಾರ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳು ವಿಭಿನ್ನವಾಗಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಪ್ರಾಮಾಣಿಕ ಸರ್ಕಾರ ಇರಲು ಸಾಧ್ಯವಿಲ್ಲ. ಆದರೆ ಪಂಜಾಬ್ ಹಾಗೂ ದೆಹಲಿಯಂತೆ ಹಿಮಾಚಲ ಪ್ರದೇಶದಲ್ಲೂ ಆಪ್ ಪಕ್ಷ ಪ್ರಾಮಾಣಿಕ ಸರ್ಕಾರವನ್ನು ನೀಡುತ್ತದೆ ಎಂದರು. ಇದನ್ನೂ ಓದಿ: ಇಮ್ಲಿವಾಲಿ ಮಸೀದಿ ಮುಂದೆ ನಮಾಜ್ ಮಾಡಿದ 150 ಮಂದಿ ವಿರುದ್ಧ FIR

ಈ ಹಿಂದೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರು ಇಲ್ಲಿ ಆಪ್ ಪಕ್ಷವನ್ನು ತರಲು ಪ್ರಯತ್ನಿಸುತ್ತಿದ್ದಾರೆ. ಅವರ ಭೇಟಿಯೂ ಚುನಾವಣೆ ಬರುವವರೆಗೂ ಮುಂದುವರೆಯುತ್ತದೆ. ಆದರೆ ಹಿಮಾಚಲ ಪ್ರದೇಶವನ್ನು ದೆಹಲಿ ಮಾದರಿಗೆ ಹೋಲಿಸುವುದು ಸರಿಯಲ್ಲ. ಇಲ್ಲಿನ ಸಾಮಾಜಿಕ ಮತ್ತು ರಾಜಕೀಯ ಸನ್ನಿವೇಶಗಳು ವಿಭಿನ್ನವಾಗಿವೆ ಎಂದು ಹೇಳಿದ್ದರು. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕೊರೊನಾ ಸೋಂಕು ಶೇ.50ಕ್ಕೆ ಏರಿಕೆ – ಕಠಿಣ ಕ್ರಮಕ್ಕೂ ಬಗ್ಗದ ಜನ

ಹಿಮಾಚಲ ಪ್ರದೇಶವು ಮೂರನೇ ವ್ಯಕ್ತಿಗೆ ಸ್ಥಾನ ಅಥವಾ ಗೌರವ ನೀಡಲ್ಲ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Leave a Reply

Your email address will not be published.

Back to top button