ಪಣಜಿ: ಬಿಜೆಪಿ ನಮ್ಮ ಪಕ್ಷದವರ ಮೇಲೆ ತನಿಖಾ ಸಂಸ್ಥೆಗಳನ್ನು ಬಳಸಿ ಅನೇಕ ಬಾರಿ ದಾಳಿ ನಡೆಸಿದೆ. ಆದರೆ ಅವರಿಗೆ ಯಾವುದೇ ಭ್ರಷ್ಟಾಚಾರದ ಕುರಿತು ದಾಖಲೆ ನೀಡಲು ಸಾಧ್ಯವಾಗಿಲ್ಲ. ಪ್ರಧಾನಿಯವರೇ ನಮ್ಮ ಸರ್ಕಾರ ಪ್ರಾಮಾಣಿಕ ಎಂಬುದನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಆಪ್ ನೇತಾರ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
Advertisement
ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಗೋವಾದ ಯುವಕರು ಬಯಸಿದ್ದಾರೆ. ನಮ್ಮ ಸರ್ಕಾರ ಪ್ರಮಾಣಿಕ ಎಂಬುದನ್ನು ಮೋದಿ ಅವರೇ ನಿರೂಪಿಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡಲು ಲಂಚ ತೆಗೆದದುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರವನ್ನು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಸಿಟಿವ್ ಇದ್ದರೂ ಶಬರಿಮಲೆಗೆ ತೆರಳ್ತಿದ್ದ 30 ಮಂದಿ ಮೇಲೆ ಎಫ್‍ಐಆರ್
Advertisement
Advertisement
ಬಿಜೆಪಿ ಕೇಂದ್ರಿಯ ತನಿಖಾ ದಳಗಳನ್ನು ಬಳಸಿಕೊಂಡು ನಮ್ಮ ಮೇಲೆ ದಾಳಿ ನಡೆಸಿದೆ. ನಮ್ಮ ವಿರುದ್ಧದ 400 ಫೈಲ್‍ಗಳನ್ನು ಪರೀಕ್ಷಿಸಲು ತನಿಖಾ ಅಯೋಗ ರಚಿಸಿತ್ತು. ಆದರೆ ಒಂದೇ ಒಂದು ತಪ್ಪನ್ನು ಕಂಡುಹಿಡಿಯಲು ಅವರಿಗೆ ಸಾಧ್ಯವಾಗಿಲ್ಲ. ಇದರಿಂದ ನಾವು ಪ್ರಮಾಣಿಕರು ಎಂಬುದನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ