ನವದೆಹಲಿ: ನನಗೆ ನೀಡಿರುವ ನೋಟಿಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ ಸಮನ್ಸ್ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.
ಸಮನ್ಸ್ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಬಿಜೆಪಿಯ ಒತ್ತಾಯದ ಮೇರೆಗೆ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ
Advertisement
Advertisement
ಕೇಜ್ರಿವಾಲ್ ಅವರು ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.
Advertisement
ಯಾರೇ ಆದರೂ ಇ.ಡಿ ಸಮನ್ಸ್ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇ.ಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇ.ಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು. ಇದನ್ನೂ ಓದಿ: ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್ ವಿಗ್ರಹ ಸ್ಥಾಪನೆ
Advertisement
ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್ ಹಿಂಪಡೆಯಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
Web Stories