ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಉದ್ದೇಶಪೂರ್ವಕವಾಗಿ ಜೈಲಿನಲ್ಲಿ ಕಡಿಮೆ ಕ್ಯಾಲರಿ ಇರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಲೆಫ್ಟಿನೆಂಟ್ ಗರ್ವನರ್ ವಿ.ಕೆ ಸಕ್ಸೇನಾ (V.K.Saxena) ಹೇಳಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರ ಪ್ರಧಾನ ಕಾರ್ಯದರ್ಶಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ತೂಕ ಕಳೆದುಕೊಳ್ಳಲು ಕಾರಣಗಳೇನು ಎಂದು ವಿವರಿಸಲಾಗಿದೆ. ಕಡಿಮೆ ಕ್ಯಾಲರಿಗಳ ಕಾರಣದಿಂದಾಗಿ ಕೇಜ್ರಿವಾಲ್ ಅವರು ತೂಕವನ್ನು ಕಳೆದುಕೊಳ್ಳುತ್ತಾರೆ. ಜೂನ್ 6 ರಿಂದ ಜುಲೈ 13 ರ ನಡುವೆ ಅವರು ಸರಿಯಾದ ಆಹಾರ ಸೇವಿಸಿಲ್ಲ. ಇದರಿಂದಾಗಿ ತೂಕ ಕಳೆದುಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ
Advertisement
Advertisement
ಪತ್ರದಲ್ಲಿ ಜೈಲು ಅಧೀಕ್ಷಕರ ವರದಿಯನ್ನು ಉಲ್ಲೇಖಿಸಿದ್ದು, ಮುಖ್ಯಮಂತ್ರಿಗಳು ವೈದ್ಯರು ಸೂಚಿಸಿದ ಆಹಾರ ಮತ್ತು ಔಷಧಿಗಳನ್ನು ಸೇವಿಸದಿರುವ ಬಗ್ಗೆ ಎಲ್‌ಜಿ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಬರೆಯಲಾಗಿದೆ. ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ವರದಿ ಹೇಳುತ್ತದೆ. ವೈದ್ಯರು ನೀಡುವ ಡಯಟ್ ಚಾರ್ಟ್ ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
Advertisement
ಎಲ್‌ಜಿ ಕಚೇರಿ ಬರೆದಿರುವ ಪತ್ರಕ್ಕೆ ಆಮ್ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಇದೇನು ತಮಾಷೆ ಎಲ್‌ಜಿ ಸಾಹೇಬರೇ! ಯಾರಾದರೂ ರಾತ್ರಿಯಲ್ಲಿ ಸಕ್ಕರೆಯನ್ನು ಕಡಿಮೆ ಮಾಡುತ್ತಾರೆಯೇ? ಯಾವುದು ತುಂಬಾ ಅಪಾಯಕಾರಿ. ಎಲ್ಜಿ ಸರ್, ನಿಮಗೆ ಕಾಯಿಲೆಯ ಬಗ್ಗೆ ತಿಳಿದಿಲ್ಲದಿದ್ದರೆ. ನೀವು ಅಂತಹ ಪತ್ರವನ್ನು ಬರೆಯಬಾರದು ಎಂದು ಕುಟುಕಿದ್ದಾರೆ.
Advertisement
ದೆಹಲಿ ಸರ್ಕಾರದ ಸಚಿವೆ ಅತಿಶಿ ಮಾತನಾಡಿ, ಬಿಜೆಪಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟ ಎಂಟು ಬಾರಿ 50ಕ್ಕಿಂತ ಕಡಿಮೆಯಾಗಿದೆ. ಕೋಮಾಕ್ಕೆ ಹೋಗಬಹುದು ಅಂತಹ ಪರಿಸ್ಥಿತಿಯಲ್ಲಿ, ಮಿದುಳಿನ ಸ್ಟ್ರೋಕ್ ಅಪಾಯವೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ – ಅರವಿಂದ್ ಕೇಜ್ರಿವಾಲ್‍ಗೆ ಮಧ್ಯಂತರ ಜಾಮೀನು
ಈ ಬಗ್ಗೆ ಬಿಜೆಪಿ ನಾಯಕ ವೀರೇಂದ್ರ ಸಚ್‌ದೇವ್ ಪ್ರತಿಕ್ರಿಯಿಸಿ, ತಿಹಾರ್ ಜೈಲಿನ ಅಧೀಕ್ಷಕರ ಪತ್ರ ಸಾರ್ವಜನಿಕವಾಗಿದೆ. ನ್ಯಾಯಾಲಯದ ಆದೇಶದ ನಂತರ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ನೀಡಲಾಗುತ್ತದೆ. ಜೂನ್ 6 ಮತ್ತು ಜುಲೈ 13 ರ ನಡುವೆ ಉದ್ದೇಶಪೂರ್ವಕವಾಗಿ ಕಡಿಮೆ ಕ್ಯಾಲರಿ ಆಹಾರ ಸೇವಿಸಿದ್ದಾರೆ. ಇದರಿಂದ ಅವರ ತೂಕ ಕಡಿಮೆಯಾಗುತ್ತದೆ. ಸಹಾನುಭೂತಿಗಾಗಿ ಅವರು ಜೈಲಿನಲ್ಲಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.