LatestMain PostNational

ಬುಲ್ಡೋಜರ್ ಕಾರ್ಯಾಚರಣೆ- ಸ್ವಾತಂತ್ರ್ಯ ಭಾರತದ ಅತಿದೊಡ್ಡ ವಿನಾಶ: ಕೇಜ್ರಿವಾಲ್

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವು 63 ಲಕ್ಷ ಜನರನ್ನು ನಿರಾಶ್ರಿತರನ್ನಾಗಿ ಮಾಡುತ್ತದೆ. ಇದು ಸ್ವಾತಂತ್ರ್ಯ ಭಾರತದ ದೊಡ್ಡ ವಿನಾಶವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿರುವ ನಾಗರಿಕ ಸಂಸ್ಥೆಗಳು ತಮ್ಮ ಅವಧಿಯ ಅಂತ್ಯದಲ್ಲಿ ಇಂತಹ ದೊಡ್ಡ ಪ್ರಮಾಣದ ಅಭಿಯಾನವನ್ನು ಪ್ರಾರಂಭಿಸಿದೆ. ಇದರಿಂದಾಗಿ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಅಧಿಕಾರವು ನಾಶವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ದೆಹಲಿ ನಿಯೋಜಿತ ನಗರವಲ್ಲ. ದೆಹಲಿಯಲ್ಲಿ ಶೇ. 80ಕ್ಕಿಂತ ಅಧಿಕ ಪ್ರದೇಶಗಳನ್ನು ಅತಿಕ್ರಮಣ ಮಾಡಿಕೊಂಡ ಪ್ರದೇಶ ಎಂದೇ ಕರೆಯಬಹುದಾಗಿದೆ. ಹಾಗಾದರೆ ಅವೆಲ್ಲವನ್ನು ಬಿಜೆಪಿ ನಾಶ ಪಡಿಸುತ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದತ್ತಪೀಠದಲ್ಲಿ ಗೋ ಮಾಂಸದೂಟ ಮಾಡುತ್ತಾರೆ: ಮುತಾಲಿಕ್ ಕಿಡಿ

ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದಾದ ಹೊಸ ನಾಗರಿಕ ಸಂಸ್ಥೆಗಳನ್ನು ಆಯ್ಕೆ ಮಾಡಬೇಕು. ಇದರಿಂದಾಗಿ ಮುಂದೂಡಲ್ಪಟ್ಟ ಮುನ್ಸಿಪಲ್ ಕಾ‌ರ್ಪೋರೇಷನ್ ಚುನಾವಣೆಯನ್ನು ಈಗಲೇ ನಡೆಸಬೇಕೆಂದು ಒತ್ತಾಯಿಸಿದರು.

ಬಿಜೆಪಿ ಅವರು 63 ಲಕ್ಷ ಜನರನ್ನು ನಿರಾಶ್ರಿತರನ್ನಾಗಿ ಮಾಡುತ್ತಿದ್ದಾರೆ. ಅವರ ಮನೆ ಮತ್ತು ಅಂಗಡಿಗಳನ್ನು ಬುಲ್ಡೋಜರ್ ಮಾಡುವ ಮೂಲಕ ಅವರ ದೈನಂದಿನ ಜೀವನವನ್ನು ಹಾಳು ಮಾಡುತ್ತಿದ್ದಾರೆ. ಇದು ಸ್ವತಂತ್ರ ಭಾರತದಲ್ಲಿ ಅತಿದೊಡ್ಡ ವಿನಾಶವಾಗಲಿದೆ. ಇದನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

Leave a Reply

Your email address will not be published.

Back to top button