ನವದೆಹಲಿ: ಜೈಲುವಾಸ ಅನುಭವಿಸುತ್ತಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರನ್ನು ನೆನಪಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕಣ್ಣೀರಾಕಿದ್ದಾರೆ.
ನಗರದಲ್ಲಿ ಬುಧವಾರ ಹೊಸ ಶಾಲೆಯನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ ಗೆಳೆಯ ಸಿಸೋಡಿಯಾ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳುತ್ತಾ ಅತ್ತು ಬಿಟ್ಟರು. ಇದನ್ನೂ ಓದಿ: ಕಾಂಗ್ರೆಸ್ ಜನರನ್ನು ಮಾತ್ರವಲ್ಲ ಸಿಎಂ ವಿಚಾರದಲ್ಲಿ ಡಿಕೆಶಿಯನ್ನೂ ಯಾಮಾರಿಸಿದೆ – ಸಂಸದ ಮುನಿಸ್ವಾಮಿ ವ್ಯಂಗ್ಯ
Advertisement
Advertisement
ಮನೀಶ್ ಜಿ ಅವರನ್ನು ಇದನ್ನು ಆರಂಭಿಸಿದರು. ಪ್ರತಿಯೊಂದು ಮಗು ಕೂಡ ಒಳ್ಳೆಯ ಶಿಕ್ಷಣ (Good Education) ವನ್ನು ಪಡೆಯಬೇಕು ಎಂಬ ಉದ್ದೇಶದಿಂದ ಅವರು ಈ ಶಾಲೆಯನ್ನು ನಿರ್ಮಾಣ ಮಾಡಲು ಪ್ರಾರಂಭಿಸಿದರು. ಆದರೆ ಇದೀಗ ಅವರು ಜೈಲಿನಲ್ಲಿದ್ದಾರೆ. ಅವರು ಮಕ್ಕಳಿಗಾಗಿ ಶಾಲೆ ನಿರ್ಮಾಣ ಮಾಡುತ್ತಾರೆ ಹಾಗೂ ಒಳ್ಳೆಯ ಶಿಕ್ಷಣವನ್ನು ನೀಡುತ್ತಾರೆ ಎಂಬ ಕಾರಣಕ್ಕಾಗಿಯೇ ಮನೀಶ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಹೇಳುತ್ತಲೇ ಕೇಜ್ರಿವಾಲ್ ಗದ್ಗದಿತರಾದರು.
Advertisement
#WATCH | Delhi CM Arvind Kejriwal gets emotional, as he remembers former education minister Manish Sisodia and his work in the area of education, at the inauguration of an educational institution pic.twitter.com/BDGSSbmpbq
— ANI (@ANI) June 7, 2023
Advertisement
ಇದೇ ವೇಳೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಇವರು ಶಿಕ್ಷಣದಲ್ಲಿ ದೆಹಲಿಯ ಕ್ರಾಂತಿಯನ್ನು ಪೂರ್ಣಗೊಳಿಸಲು ಬಯಸುತ್ತಾರೆ. ಆದರೆ ಹಾಗೆ ಆಗಲು ನಾವು ಬಿಡಲ್ಲ ಎಂದು ಕಿಡಿಕಾರಿದರು.
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರು ಕಳೆದ ಫೆಬ್ರವರಿಯಿಂದ ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು