LatestMain PostNational

ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ

ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ ಮತ್ತು ಅವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯಾವುದೇ ಬದಲಾವಣೆಯನ್ನು ತರುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬದಲಿಗೆ ಪಂಜಾಬ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಯಾವುದೇ ಬದಲಾವಣೆಯಾಗುವುದಿಲ್ಲ, ಏಕೆಂದರೆ ಅವರು ಎಲ್ಲಾ ಕಡೆಯಿಂದ ತಿರಸ್ಕರಿಸಲ್ಪಟ್ಟ ರಾಜಕೀಯ ನಾಯಕರನ್ನು ಹೊಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಕ್ರಾಂತಿಕಾರಿಯೂ ಅಲ್ಲ ಅಥವಾ ಭಗತ್ ಸಿಂಗ್ ಶಿಷ್ಯರೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ, ದೊಡ್ಡ ದೊಡ್ಡ ಸುಳ್ಳುಗಳನ್ನೇ ಹೇಳುತ್ತಾರೆ. ಕೆಲವೊಮ್ಮೆ ಅವರು ನೀಡಿದ ಹೇಳಿಕೆಗಳನ್ನೇ ತಿರುಗಿಸುತ್ತಾರೆ. ಮತ್ತೆ ಕೆಲವೊಮ್ಮೆ ಕ್ಷಮೆಯಾಚಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮೆಟ್ರೋವನ್ನು ತಂದಿದ್ದು ಎಸ್‍ಪಿ ಸರ್ಕಾರ, ಉದ್ಘಾಟಿಸಿದ್ದು ಯೋಗಿ ಆದಿತ್ಯನಾಥ್: ಅಖಿಲೇಶ್ ಯಾದವ್

ಇದೇ ವೇಳೆ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಅವರು ಸ್ಪರ್ಧಿಸುತ್ತಿರುವ ಎರಡೂ ಸ್ಥಾನಗಳಲ್ಲಿ ಉತ್ತಮ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಎರಡು ವರ್ಷಗಳ ಬಳಿಕ ಮಗನನ್ನು ಭೇಟಿಯಾದ ಶಿಖರ್ ಧವನ್

Leave a Reply

Your email address will not be published.

Back to top button