ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಇಂದು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಜನರು ಪಕ್ಷಕ್ಕೆ ಸಲ್ಲಿಸುವ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿ ಹೆಸರು ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಎಎಪಿಯಿಂದ ಉನ್ನತ ಹುದ್ದೆಗೆ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ರೇಸ್‌ನಲ್ಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ತವರಿಗೆ ಚುನಾವಣೆ ಫಿಕ್ಸ್ – ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ
Advertisement
Advertisement
ಕೇಜ್ರಿವಾಲ್ ಅವರು ಶುಕ್ರವಾರ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೆಸರನ್ನು ಘೋಷಿಸಲಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಅವರು, ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು SMS, WhatsApp, ಧ್ವನಿ ಮೇಲ್ ಮತ್ತು ಇ-ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸಲು ಜನತೆಗೆ ಮನವಿ ಮಾಡಿದ್ದರು.
Advertisement
ನವೆಂಬರ್ 3ರ ಸಂಜೆಯವರೆಗೆ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅವರ ಅಭಿಪ್ರಾಯಗಳ ಆಧಾರದ ಮೇಲೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ನ.4ರಂದು ಪ್ರಕಟಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ
Advertisement
ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಅಲ್ಲದೇ ಡಿಸೆಂಬರ್ 8ಕ್ಕೆ ಮತ ಎಣಿಕೆ ನಡೆಯಲಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ.