ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಕಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್‍ನಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಆಪ್ ಮುಖಂಡರು ವಿಚಾರಣೆ ಎದುರಿಸಬೇಕಿದೆ.
ಅರುಣ್ ಜೇಟ್ಲಿ ಅವರು 2000-12ರವರೆಗೆ ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾಗ ಭ್ರಷ್ಟಾಚಾರ ನಡೆದಿದೆ ಎಂದು ಆಪ್ ಮುಖಂಡರು ಆರೋಪ ಮಾಡಿದ್ದರು. ಇದರ ವಿರುದ್ಧ ಅರುಣ್ ಜೇಟ್ಲಿ, ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ರಾಘವ್ ಚಡ್ಡಾ, ಅಶುತೋಶ್ ಹಾಗೂ ದೀಪಕ್ ಬಾಜ್ಪೈ ಅವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಸೇರಿದಂತೆ ಎರಡು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಸುಳ್ಳು ಹೇಳಿಕೆ ನೀಡಿ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ 10 ಕೋಟಿ ರೂ. ನೀಡುವಂತೆ ಕೇಜ್ರಿವಾಲ್ ಹಾಗೂ ಇತರೆ ಮುಖಂಡರ ಮೇಲೆ ಜೇಟ್ಲಿ ಸಿವಿಲ್ ಕೇಸ್ ಹಾಕಿದ್ದರು.
Advertisement
ಇಂದು ಅದರ ವಿಚಾರಣೆ ನಡೆಸಿದ ದೆಹಲಿ ಪಟಿಯಾಲ ಕೋರ್ಟ್, ಕೇಜ್ರಿವಾಲ್ ವಿರುದ್ಧ ವಿಚಾರಣೆಗೆ ಆದೇಶ ನೀಡಿದೆ. ಮೇ 20ರಿಂದ ವಿಚಾರಣೆ ಆರಂಭವಾಗಲಿದೆ.
Advertisement