ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಅರವಿಂದ್‌ ಕೇಜ್ರಿವಾಲ್‌ ಭೇಟಿ

Public TV
1 Min Read
Arvind Kejriwal

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸೋಮವಾರ ಅಯೋಧ್ಯೆಯ ರಾಮಮಂದಿರಕ್ಕೆ (Ram Mandir) ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ (AAP) ನಾಯಕ ಅವರ ಪತ್ನಿ ಮತ್ತು ಕುಟುಂಬಸ್ಥರೊಂದಿಗೆ ಭೇಟಿ ನೀಡಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಕೂಡ ಪವಿತ್ರ ತಾಣಕ್ಕೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ದರ್ಶನಕ್ಕೆ ಅಯೋಧ್ಯೆಗೆ ಬಸ್‌ನಲ್ಲಿ ತೆರಳಿದ ಯುಪಿ ಶಾಸಕರು

AYODHYA RAM MANDIR 1

ಜ.22 ರಂದು ನಡೆದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ತನಗೆ ಔಪಚಾರಿಕ ಆಹ್ವಾನ ಬಂದಿಲ್ಲ ಎಂದು ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು. ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದಾರೆ ಎನ್ನಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜ.22 ರಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರೋಕ್ತವಾಗಿ ನೆರವೇರಿತು. ಇದಾದ ಬಳಿಕ ಪಕ್ಷಾತೀತವಾಗಿ ನಾಯಕರು ಕೂಡ ಪವಿತ್ರ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ಬಾಲ ರಾಮನ ಕಣ್ಣನ್ನು ಕೆತ್ತಿದ್ದ ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆಯ ಫೋಟೋ ಹಂಚಿಕೊಂಡ ಯೋಗಿರಾಜ್‌

ಬಿಜೆಪಿ, ಕಾಂಗ್ರೆಸ್, ಮಾಯಾವತಿಯವರ ಬಹುಜನ ಸಮಾಜ ಪಕ್ಷ, ಒಪಿ ರಾಜ್‌ಭರ್ ನೇತೃತ್ವದ ಎಸ್‌ಬಿಎಸ್‌ಪಿ ಮತ್ತು ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ ಸೇರಿದಂತೆ ಇತರ ಪಕ್ಷಗಳ ಶಾಸಕರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

Share This Article