ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

Public TV
1 Min Read
Swati Maliwal Arvind Kejriwal

ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ತನ್ನ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಕೊನೆಗೂ ಮೌನ ಮುರಿದಿದ್ದಾರೆ.

ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್‌, ನ್ಯಾಯಯುತ ತನಿಖೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

Bibhav Kumar

ಅರವಿಂದ್‌ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ (Bibhav Kumar) ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್‌ ಪೊಲೀಸರಿಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸ್ವಾತಿ ಮಲಿವಾಲ್‌ ವಿರುದ್ಧ ಬಿಭವ್‌ ಕೂಡ ದೂರು ದಾಖಲಿಸಿದ್ದರು.

ಹಲ್ಲೆ ಪ್ರಕರಣದಲ್ಲಿ ಆರೋಪಿ ಬಿಭವ್‌ ಬಂಧನಕ್ಕೊಳಗಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

Share This Article