ಚಂಡೀಗಢ: ಖಲಿಸ್ತಾನ್ ಮತ್ತು ಖಲಿಸ್ತಾನಿಗಳೊಂದಿಗಿನ ಅರವಿಂದ್ ಕೇಜ್ರಿವಾಲ್ ಸಂಪರ್ಕ ಹೊಂದಿರುವುದರಿಂದ ಪಂಜಾಬ್ಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಟಾಂಗ್ ನೀಡಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಅವರು, ಕೇಜ್ರಿವಾಲ್ ತಮ್ಮ ಮೇಲಿನ ಆರೋಪಗಳನ್ನು ಸಹ ನಿರಾಕರಿಸಿಲ್ಲ. ಅವರೇ ‘ನಾನು ಭಯೋತ್ಪಾದಕ’ ಎಂದು ಹೇಳಿಕೊಳ್ಳುತ್ತಿದ್ದಾರೆ ಮತ್ತು ಖಲಿಸ್ತಾನ್ ಬಗ್ಗೆ ಮಾತನಾಡುತ್ತಾರೆ, ಖಲಿಸ್ತಾನಿಗಳನ್ನು ಬೆಂಬಲಿಸುತ್ತಾರೆ. ಎಲ್ಲೋ ಕೇಜ್ರಿವಾಲ್ ಅವರು ಹೊಂದಿರುವ ಈ ಲಿಂಕ್ ಪಂಜಾಬ್ಗೆ ಮಾರಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪಂಜಾಬ್ ಸಿಎಂ ಅಥವಾ ಖಲಿಸ್ತಾನ್ ಪಿಎಂ – ಕುಮಾರ್ ವಿಶ್ವಾಸ್ ವೀಡಿಯೋ ವೈರಲ್
Advertisement
Advertisement
ಅರವಿಂದ್ ಕೇಜ್ರಿವಾಲ್ ಅವರು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಅಥವಾ ಖಲಿಸ್ತಾನ್ ಪ್ರಧಾನಿಯಾಗಲು ಬಯಸಿದ್ದಾರೆ ಎಂಬ ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಆರೋಪದ ಬಳಿಕ ಈ ವಿಚಾರದ ಬಗ್ಗೆ ಭಾರೀ ಚರ್ಚೆ ಆರಂಭವಾಯಿತು. ಇದನ್ನೂ ಓದಿ: ಕುಮಾರ್ ವಿಶ್ವಾಸ್ ಆರೋಪದ ಬಗ್ಗೆ ಸ್ಪಷ್ಟನೆ ನೀಡಿ: ಕೇಜ್ರಿವಾಲ್ಗೆ ರಾಹುಲ್ ಪ್ರಶ್ನೆ
Advertisement
“One day, he told me he would either become CM (of Punjab) or first PM of an independent nation (Khalistan),” Former AAP leader Kumar Vishwas recounts his conversation with Arvind Kejriwal.
This could be extremely dangerous, if AAP were to form Govt in Punjab.#SavePunjab pic.twitter.com/uUSSaqKfDW
— Amit Malviya (@amitmalviya) February 16, 2022
Advertisement
ಅರವಿಂದ್ ಕೇಜ್ರಿವಾಲ್ ಒಬ್ಬ ಭಯೋತ್ಪಾದಕ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಟೀಕಿಸಿದ್ದರು. ಅದಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳ ನಾಯಕರಿಗೆ ಈ ಭ್ರಷ್ಟರೆಲ್ಲ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವ, ವಿದ್ಯುತ್ ಸಮಸ್ಯೆಗಳನ್ನು ಸರಿಪಡಿಸುವ ವಿಶ್ವದ ಮೊದಲ ಭಯೋತ್ಪಾದಕ ನಾನು. ನಾನು ವಿಶ್ವದ ಮೊದಲ ಸಿಹಿಯಾದ ಭಯೋತ್ಪಾದಕ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಹೇಳಿಕೆ – ಎಎಪಿ ಮಾಜಿ ನಾಯಕನಿಗೆ ʼವೈʼ ಶ್ರೇಣಿ ಭದ್ರತೆ
ಒಂದು ವೇಳೆ ನಾನು ಪ್ರತ್ಯೇಕತಾವಾದಿಗಳ ಪರ ಎಂದಿದ್ದರೆ ಪ್ರಧಾನಿ ಮೋದಿ ಅವರು ಈ ಆರೋಪಗಳನ್ನು ಏಕೆ ಸಾಬೀತುಪಡಿಸಲಿಲ್ಲ ಅಥವಾ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ