ಬೆಂಗಳೂರು: ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ ನೆರವು ಘೋಷಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ. ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
Advertisement
ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ.
ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/7wN1lQi1g8
— Aravind Limbavali (@ArvindLBJP) February 21, 2022
Advertisement
ನಿನ್ನೆ ನಡೆದ ಆಘಾತಕಾರಿ ಘಟನೆಯಲ್ಲಿ ತಮ್ಮ ಮಗನನ್ನು ಕಳೆದುಕೊಂಡ ಹರ್ಷ ಕುಟುಂಬಸ್ಥರಿಗೆ ನಾನು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ ಮತ್ತು ಎಲ್ಲಾ ನೋವು ಮತ್ತು ದುಃಖಗಳಲ್ಲಿ ಅವರ ಕುಟುಂಬದ ಜೊತೆಗಿರುತ್ತೇನೆ ಎಂದು ಟ್ವೀಟ್ ಮಾಡಿ ಸಹಾಯ ಹಸ್ತವನ್ನು ಚಾಚುವುದಾಗಿ ತಿಳಿಸಿದ್ದಾರೆ.
Advertisement
ನಿನ್ನೆ ನಡೆದ ಆಘಾತಕಾರಿ ಘಟನೆಯಲ್ಲಿ ತಮ್ಮ ಮಗನನ್ನು ಕಳೆದುಕೊಂಡ ಹರ್ಷ ಕುಟುಂಬಸ್ಥರಿಗೆ ನಾನು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ ಮತ್ತು ಎಲ್ಲಾ ನೋವು ಮತ್ತು ದುಃಖಗಳಲ್ಲಿ ಅವರ ಕುಟುಂಬದ ಜೊತೆಗಿರುತ್ತೇನೆ. pic.twitter.com/1oPcP7q0md
— Aravind Limbavali (@ArvindLBJP) February 21, 2022
Advertisement
ನಡೆದಿದ್ದೇನು?: ಭಾನುವಾರ ರಾತ್ರಿ ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ: ಕೆ. ಸುಧಾಕರ್
ಆ ಬಳಿಕದಿಂದ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಇಮದು ಹರ್ಷ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕ ತಿರುಗಿತು. ಸದ್ಯ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿದಾನ ಮಾಡಿದ ತಾಯಿ!