ಹುಬ್ಬಳ್ಳಿ: ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆಯನ್ನು ನಾನು ಒಬ್ಬ ಹಿಂದೂವಾಗಿ ಒಪ್ಪುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಮತ್ತು ಕಾಂಗ್ರೆಸ್ ಪಕ್ಷ ಅವರ ಹೇಳಿಕೆಯನ್ನ ಒಪ್ಪುವುದಿಲ್ಲ. ನಮ್ಮ ಸಂಸ್ಕೃತಿ ಎಲ್ಲ ಧರ್ಮ, ಜಾತಿ ಒಟ್ಟಿಗೆ ತೆಗೆದುಕೊಂಡು ಹೋಗುವುದು ನಮ್ಮ ಕರ್ತವ್ಯ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ (Hindu) ಧರ್ಮದವನು ಧರ್ಮಕ್ಕೆ ನಮ್ಮದೇ ಆದ ಇತಿಹಾಸವಿದೆ. ಸತೀಶ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗೋದಿಲ್ಲ. KPCC ಇಂದ ಈ ಬಗ್ಗೆ ಸ್ಪಷ್ಟನೆ ಪಡೆಯುತ್ತೇವೆ. ಸಾರ್ವಜನಿಕ ಬದುಕಿನಲ್ಲಿ ಈ ರೀತಿ ಹೇಳಿಕೆ ನೀಡುವುದು ಖಂಡನೀಯ ಎಂದರು. ಇದನ್ನೂ ಓದಿ: ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – 26 ನಾಯಕರು BJP ಸೇರ್ಪಡೆ
ಬೀದಿಬದಿ ವ್ಯಾಪಾರಸ್ಥರಿಂದ ಬೈರತಿ ಬಸವರಾಜ್ (Byrati Basavaraj) ಕಮಿಷನ್ ಪಡೆದ ಆರೋಪ ಬಗ್ಗೆ ಮಾತನಾಡಿದ ಅವರು, ಸರ್ಕಾರ ನಿಂತಿರುವುದೇ ಕಮಿಷನ್ ಮೇಲೆ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಉತ್ತರ ಕೊಡಬೇಕು. ಬೀದಿ ಬದಿ ವ್ಯಾಪಾರಿಗಳಿಂದಲೂ ಹಣ ಪಡೆಯುವ ಮಟ್ಟಕ್ಕೆ ಸರ್ಕಾರ ಬಂದಿದೆ ಅಂತ ಆರೋಪ ಮಾಡಿದರು.