– ಚುನಾವಣಾ ರ‍್ಯಾಲಿ ಸ್ಥಗಿತಗೊಳಿಸಿದ ಅಮಿತ್ ಶಾ
ಇಂಫಾಲ್: ಇತ್ತೀಚೆಗೆ ಮಣಿಪುರದ ಜಿರಿಬಾಮ್‌ನಿಂದ (Manipur Jiribam) ನಾಪತ್ತೆಯಾಗಿದ್ದ 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದ ನದಿಯಲ್ಲಿ (River) ಪತ್ತೆಯಾಗಿತ್ತು. ಈ ಬೆನ್ನಲ್ಲೇ ಭಾನುವಾರ (ಇಂದು) ಬೆಳಗ್ಗೆ ರುಂಡವಿಲ್ಲದ ಮತ್ತೊಂದು ಮಹಿಳೆಯ ಮೃತದೇಹ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ, ಜೊತೆಗೆ ಉಗ್ರರು ಒತ್ತೆಯಾಳಾಗಿ ಇರಿಸಿದ್ದರು ಎನ್ನಲಾದ 2 ವರ್ಷದ ಮಗುವಿನ ದೇಹವು ಪತ್ತೆಯಾಗಿದೆ ಎಂದು ವರದಿಯಾಗಿದೆ.
Advertisement
ಜಿರಿಬಾಮ್ ಜಿಲ್ಲೆಯ ಗಡಿಯಲ್ಲಿರುವ ಬರಾಕ್ ನದಿಯಲ್ಲಿ ತೇಲಿಬರುತ್ತಿದ್ದ ಮೃತದೇಹವನ್ನು ಅಸ್ಸಾಂನ ಕ್ಯಾಚರ್ ಜಿಲ್ಲೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಆದ್ರೆ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಒಟ್ಟಿನಲ್ಲಿ ನಾಪತ್ತೆಯಾದ 6 ಮಂದಿಯಲ್ಲಿ ಇವರೂ ಒಬ್ಬರೆಂದು ಶಂಕಿಸಲಾಗಿದೆ. 4ನೇ ಮೃತದೇಹ ಪತ್ತೆಯಾದ ಬೆನ್ನಲ್ಲೇ ಮಣಿಪುರದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ. ಇದನ್ನೂ ಓದಿ: ರೈಲು ವಿಳಂಬ – ಸರಿಯಾದ ಸಮಯಕ್ಕೆ ವರನನ್ನು ಮದುವೆಗೆ ಕರೆದೊಯ್ದ ರೈಲ್ವೇ ಇಲಾಖೆ
Advertisement
Advertisement
ಭುಗಿಲೆದ್ದ ಹಿಂಸಾಚಾರ:
ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು. ನಿಂಗ್‌ತೊಕೊಂಗ್‌ನಲ್ಲಿ ಲೋಕೋಪಯೋಗಿ ಸಚಿವ ಗೋವಿಂದಾಸ್ ಕೊಂತುಜಮ್, ಲಾಂಗ್‌ಮೇಡಾಂಗ್ ಬಜಾರ್‌ನಲ್ಲಿನ ಬಿಜೆಪಿ ಶಾಸಕ ವೈ ರಾಧೇಶ್ಯಾಮ್, ತೌಬಲ್ ಜಿಲ್ಲೆಯ ವಾಂಗ್‌ಜಿಂಗ್ ತೆಂತಾದ ಬಿಜೆಪಿ ಶಾಸಕ ಪಿ. ಬ್ರೋಜೆನ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಖುಂಡ್ರಕ್‌ಪಾಮ್‌ನ ಕಾಂಗ್ರೆಸ್ ಶಾಸಕ ತೊಕ್ಚೋಮ್ ಲೋಕೇಶ್ವರ್ ಅವರ ಮನೆಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿತ್ತು. ಇದರಿಂದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತು.
Advertisement
ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಶಾ:
ಇನ್ನು ಮಣಿಪುರದಲ್ಲಿ ಹೆಚ್ಚಿದ ಹಿಂಸಾಚಾರದಿಂದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರದಲ್ಲಿ ನಡೆಯಬೇಕಿದ್ದ ತಮ್ಮ ಚುನಾವಣಾ ರ‍್ಯಾಲಿಗಳನ್ನು ರದ್ದುಗೊಳಿಸಿದ್ದಾರೆ. ಮೂಲಗಳ ಪ್ರಕಾರ, ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಗೃಹ ಸಚಿವರು ಸಭೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ ಮಣಿಪುರದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್ ಅವರು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳುವ ಸಾಧ್ಯತೆಗಳಿದ್ದು, ಚುನಾವಣಾ ರ‍್ಯಾಲಿಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಸ್ಕ್ ಜೊತೆ ಒಪ್ಪಂದ – ಫಸ್ಟ್ ಟೈಂ ಸ್ಪೇಸ್ ಎಕ್ಸ್ ರಾಕೆಟ್‌ನಲ್ಲಿ ಹಾರಲಿದೆ ಇಸ್ರೋ ಉಪಗ್ರಹ