ನವದೆಹಲಿ: ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ದೆಹಲಿ (Delhi Air Pollution), ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಜನ ಉಸಿರಾಡುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.
Commission for Air Quality Management (CAQM) decides to invoke Stage III of the GRAP in Delhi NCR with effect from 8:OO am of 15th November in addition to all actions under Stage I and II to prevent further deterioration of air quality in the national capital region. pic.twitter.com/61K6S51u18
— ANI (@ANI) November 14, 2024
Advertisement
ಈ ಹಿನ್ನೆಲೆಯಲ್ಲಿ ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು (CAQM) ಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ (ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP-III) ಜಾರಿಗೆ ಮುಂದಾಗಿದೆ. ನವೆಂಬರ್ 15ರ ಶುಕ್ರವಾರದಿಂದಲೇ ಈ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿವೆ.
Advertisement
Advertisement
ಏನೇನು ಕ್ರಮ ?
ಜಿಆರ್‌ಎಪಿ-3 (GRAP-III) ಜಾರಿಯಲ್ಲಿರುವವರೆಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗುತ್ತಿದ್ದು, ಆನ್‌ಲೈನ್ ಮೂಲಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ. BS-3 ಪೆಟ್ರೋಲ್ ಡಿಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗುತ್ತದೆ. ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದ್ದು, ಸರ್ಕಾರಿ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ಚಿಮುಕಿಸುವುದನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ. ದೆಹಲಿ ಎನ್‌ಸಿಎಆರ್‌ನಲ್ಲಿ 5ನೇ ತರಗತಿವರೆಗಿನ ಶಾಲೆಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಮುಖ್ಯವಾಗಿ ದೆಹಲಿ ನಿವಾಸಿಗಳು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ಕಟ್ಟುನಿಟ್ಟಾಗಿ ಹೇಳಿದೆ.
Advertisement
ಅಪಾಯ ಮಟ್ಟ ಮೀರಿದ ಮಾಲಿನ್ಯ:
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉಸಿರಾಟಕ್ಕೆ ಯೋಗ್ಯ ಗಾಳಿ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.
300ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ:
ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದೆಹಲಿಯ ಜನ ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.