ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ (CM Siddaramaiah) ಇದೆ. ಹಾಗಾಗಿ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalakr) ಹೇಳಿದರು.
ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ ಎಲ್ಲಾ ನಗಣ್ಯ. ಮುಡಾ ಹಗರಣದಲ್ಲಿ (MUDA Scam) ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಏನೋ ಮಾಡುತ್ತಿದ್ದಾರೆ. ಇಂಥ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಷ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ
Advertisement
ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ‘ಕೈ’ ನಾಯಕರ ಹೇಳಿಕೆ ಬಗ್ಗೆ ಮಾತನಾಡಿ, ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ
Advertisement
Advertisement
ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲಾ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪರ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ
Advertisement