ವಿಜಯಪುರ: ಬಳ್ಳಾರಿ ರೆಡ್ಡಿ ಬ್ರದರ್ಸ್ ಗಳ ಬಗ್ಗೆ ಸಮರ್ಥನೆ ಮಾಡಿಕೊಂಡ ಪ್ರಧಾನಿ ಮೋದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜೆಡಿಎಸ್ ಸಮಾವೇಶದ ಬಳಿಕ ಮಾತನಾಡಿದ ಹೆಚ್‍ಡಿಕೆ, ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ನಡೆದ ಕಳ್ಳ ಸಾಗಾಣಿಕೆ ಹಾಗೂ ಅಲ್ಲಿಯ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಧಾನಿ ಮೋದಿ ಅವರ ನೈತಿಕತೆ ಉಳಿಸಿಕೊಂಡಿಲ್ಲವೆಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
Advertisement
ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಹೊರತಾಗಿಲ್ಲ. ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಸಿದ್ದರಾಮಯ್ಯ, ಪಾದಯಾತ್ರೆ ಹೆಸರಲ್ಲಿ ಅಧಿಕಾರ ಪಡೆದಿದ್ದಾರೆ. ಆದರೆ ಬಳ್ಳಾರಿ ಜನರನ್ನು ಬಡತನದಲ್ಲಿ ಇಟ್ಟಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರ 5 ವರ್ಷದ ಆಡಳಿತದಲ್ಲಿ ಅಕ್ರಮ ಗಣಿಗಾರಿಕೆ ವಿಚಾರವಾಗಿ ಯಾರ ಮೇಲೆ ಕ್ರಮಕೈಗೊಂಡಿದೆ ತೋರಿಸಲಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಈ ಸಲ ಕಪ್ ನಮ್ದೆ, ಸಮ್ಮಿಶ್ರ ಸರ್ಕಾರ ಇಲ್ಲ: ಎಚ್‍ಡಿಕೆ
Advertisement
ಪ್ರಧಾನಿ ಮೋದಿ ಅವರು ಹೇಳಿದ ಹಾಗೆ ಸಿದ್ದರಾಮಯ್ಯ ಪಕ್ಷಾಂತರಿ ಸಿಎಂ. ನಾಳೆ ಬಿಜೆಪಿಗೆ ಹೋದರೂ ಆಶ್ಚರ್ಯ ಪಡುವ ಹಾಗಿಲ್ಲ ಎಂದಿದ್ದಾರೆ. ಚುನಾವಣಾ ಫಲಿತಾಂಶದಲ್ಲಿ ಅತಂತ್ರ ಬಂದರೆ. ಇದೇ ಸಿದ್ದರಾಮಯ್ಯ ನೇತೃತ್ವದಲ್ಲಿ 50-60 ಜನ ಶಾಸಕರ ಜೊತೆ ಬಿಜೆಪಿ ಬಾಗಿಲು ತಟ್ಟಿದರೂ ಆಶ್ಚರ್ಯಪಡುವ ಹಾಗಿಲ್ಲವೆಂದು ಸಿದ್ದು ವಿರುದ್ಧ ಹೆಚ್‍ಡಿಕೆ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಯವರು ನನಗೆ ಬೌಲಿಂಗ್ ಮಾಡೋಕೆ ಆಗಲ್ಲ: ಮೋದಿಗೆ ಕುಮಾರಸ್ವಾಮಿ ಟಾಂಗ್
Advertisement