ಮಂಡ್ಯ: ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ ಎಂದು ಸಚಿವ ಜಮೀರ್ ಅಹಮದ್ (Zameer Ahmed Khan) ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ (Mandya) ಮಾತನಾಡಿದ ಅವರು, ಚಂದ್ರಶೇಖರ ಶ್ರೀಗಳು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಆದ್ರೆ ಸಿಎಂ ಖುರ್ಚಿ ಈಗ ಎಲ್ಲಿ ಖಾಲಿಯಿದೆ? ಖಾಲಿ ಇರುವಾಗ ಚರ್ಚೆ ಮಾಡಬೇಕು, ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸೂರ್ಯನ ಸ್ಟನ್ನಿಂಗ್ ಕ್ಯಾಚ್ ಸುತ್ತ ವಿವಾದದ ಹುತ್ತ – ಅಂಪೈರ್ ವಿರುದ್ಧ ಸಿಡಿದ ಆಫ್ರಿಕಾ ಫ್ಯಾನ್ಸ್!
ಸ್ವಾಮೀಜಿ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ. ಒಕ್ಕಲಿಗರು, ಲಿಂಗಾಯತರು, ದಲಿತರು ಕೇಳ್ತಿದ್ದಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ? ನಮ್ಮದು ಹೈಕಮಾಂಡ್ ಪಕ್ಷ. ನಮ್ಮ ಪಕ್ಷದ ಹೈಕಮಾಂಡ್ ಯಾರು ಸಿಎಂ ಅಂತ ತೀರ್ಮಾನಿಸುತ್ತೆ. ಹೈಕಮಾಂಡ್ (Congress HighCommand) ಹಾಕಿದ ಗೆರೆಯನ್ನ ನಾವ್ಯಾರು ದಾಟಲ್ಲ. ಇದು ನಮ್ಮ ಪಕ್ಷದ ನಿಯಮ. ಏನೇ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.
ಇನ್ನೂ ಸಿಎಂ ಬದಲಾವಣೆ ವಿಚಾರ ಮಾತಾಡದಂತೆ ಸಚಿವ, ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರ ಸೂಚನೆ ನೀಡಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ವಿಚಾರ ನನಗೆ ಗೊತ್ತಿಲ್ಲ ಎಂದು ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ