ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಆಗಮಿಸಿದ್ದ ವರನ ಗೆಳೆಯರು 5 ಲೀಟರ್ ಪೆಟ್ರೋಲ್ ಅನ್ನು ದಂಪತಿಗೆ ಉಡುಗೊರೆಯಾಗಿ ನೀಡಿ ಶುಭಾಶಯವನ್ನು ಕೋರಿದ್ದಾರೆ. ದೇಶದಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಅಧಿಕವಾಗಿದ್ದರಿಂದ ಸ್ನೇಹಿತರು ನವದಂಪತಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ ಎನ್ನಲಾಗಿದೆ.
Advertisement
ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದರೆಲ್ಲರು ನಕ್ಕಿದ್ದಾರೆ. ಅಲ್ಲದೇ ಕೆಲವರು ಗಿಫ್ಟ್ ಕೊಡುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಆಗಿದ್ದು, ಸದ್ಯ ಎಲ್ಲೆಲ್ಲೂ ಹರಿದಾಡುತ್ತಿದೆ.
Advertisement
Advertisement
ವಿದ್ಯಾರ್ಥಿ ಪ್ರಭು ಮೊದಲಿಗೆ ಉಡುಗೊರೆಯಾಗಿ ಪೆಟ್ರೋಲ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶದಾದ್ಯಂತ ಇಂಧನ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲು ಇದೊಂದು ಪ್ರಯತ್ನವಾಗಿದೆ. ಇಂಧನ ಬೆಲೆಗಳು ದೇಶಾದ್ಯಂತ ತೀವ್ರವಾಗಿ ಏರುತ್ತಿವೆ. ಹಾಗಾಗಿ ವರನ ಸ್ನೇಹಿತರಲ್ಲಿ ಕೆಲವರು ಪೆಟ್ರೋಲ್ ನನ್ನು ದಂಪತಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದರು. ಜೊತೆಗೆ ಈ ಮೂಲಕ ಬೆಲೆಬಾಳುವ ಉತ್ಪನ್ನದ ಕುರಿತು ಜನರನ್ನು ಎಚ್ಚರಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.
Advertisement
ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 85.15 ರೂ. ತಲುಪಿದೆ. ಇದು ರಾಜ್ಯದಲ್ಲಿಯೇ ಅಧಿಕವಾಗಿದೆ. ಪೆಟ್ರೋಲ್ ವೆಚ್ಚದಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಸರ್ಕಾರ ಈ ವಿಚಾರದಲ್ಲಿ ಗಮನಹರಿಸಬೇಕು ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv