LatestMain PostNational

ಮೋದಿ ಆಡಳಿತದ ವಿರುದ್ಧ ಕೆಸಿಆರ್ ಕಿಡಿ

ಪಾಟ್ನಾ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಲು ಬುಧವಾರ ಬಿಹಾರಕ್ಕೆ ಭೇಟಿ ನೀಡಿದ್ದರು. ಜೊತೆಗೆ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ “ಬಿಜೆಪಿ-ಮುಕ್ತ ಭಾರತಕ್ಕೆ ಕರೆ ನೀಡಿದರು.

 

ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಅನೇಕ ಸಮಸ್ಯೆಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಆಡಳಿತ ಕಾರಣವೆಂದು ಆರೋಪಿಸಿದರು. ಇದೇ ವೇಳೆ ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯ ಕುರಿತಂತೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂನ ಸುಳಿವು ಕೊಟ್ಟವರಿಗೆ 25 ಲಕ್ಷ ನಗದನ್ನು ಘೋಷಿಸಿದ ಎನ್‍ಐಎ

ಜೂನ್ 2020ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಮಡಿದ ಬಿಹಾರದ ಐವರು ಸೈನಿಕರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಚೆಕ್‍ಗಳನ್ನು ಹಸ್ತಾಂತರಿಸಲು ಕೆಸಿಆರ್ ಅವರು ಪಾಟ್ನಾಕ್ಕೆ ಭೇಟಿ ನೀಡುವ ಉದ್ದೇಶವನ್ನು ಹೊಂದಿದ್ದರು. ಹೀಗಾಗಿ ಬುಧವಾರ ಪಾಟ್ನಾಕ್ಕೆ ಬಂದಿದ್ದರು. ಇದನ್ನೂ ಓದಿ: ಅಬುಧಾಬಿಯಲ್ಲಿ ನಿರ್ಮಾಣವಾಗ್ತಿದೆ ಮೊದಲ ಹಿಂದೂ ದೇವಾಲಯ – ಜೈಶಂಕರ್‌ ಭೇಟಿ

ಇದೇ ವೇಳೆ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಲೆ ಏರಿಕೆ, ನಿರುದ್ಯೋಗ, ಖಾಸಗೀಕರಣ ನೀತಿಗಳ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ‘ಬಿಜೆಪಿ-ಮುಕ್ತ್ ಭಾರತ’ಕ್ಕೆ ಕರೆ ನೀಡಿದರು. ಸಾಧ್ಯವಾದಷ್ಟು ರೀತಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಬೇಕು ಎಂದರು.

Live Tv

Leave a Reply

Your email address will not be published.

Back to top button