ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರನ್ನು ‘ಭಾರತ ವಿರೋಧಿ ಸ್ನೇಹಿತರು’ ರಕ್ಷಿಸಬಹುದು ಎಂದು ನಾನು ಭಾವಿಸಿದ್ದೇನೆ. ಕೆನಡಾ ಪ್ರಧಾನಿ ಈಗ ತಮ್ಮ ದೇಶದಲ್ಲೇ ರಕ್ಷಣೆಗಾಗಿ ರಹಸ್ಯ ಸ್ಥಳಕ್ಕೆ ಸ್ಥಳಾಂತರವಾಗಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ಟ್ವೀಟ್ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕಾಂಗ್ರೆಸ್ ಜೊತೆಗೆ ಕೆನಡಾ ಪ್ರಧಾನಿ ಕೂಡ ಬೆಂಬಲ ಸೂಚಿಸಿದ್ದರು. ಆ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದರು. ಆದರೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರೇ ಈಗ ಕೆನಡಾ ಪ್ರಧಾನಿ ಹೇಳಿಕೆ ಉಲ್ಲೇಖಿಸಿ ಟೀಕಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಹಾಗಾದರೆ ಸಿಂಘ್ವಿ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ವ್ಯಕ್ತವಾಗಿದೆ. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ
Advertisement
Advertisement
ಕೆನಡಾದಲ್ಲಿ ಕೋವಿಡ್ ವ್ಯಾಕ್ಸಿನ್ ವಿರೋಧಿ ಪ್ರತಿಭಟನೆಯು ತೀವ್ರಗೊಂಡಿದ್ದು, ರಕ್ಷಣೆಗಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ರಹಸ್ಯ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ. ಇದನ್ನು ಭಾರತದ ರೈತರ ಪ್ರತಿಭಟನೆಗೆ ತಳಕು ಹಾಕಿ ನೋಡಿರುವ ಕಾಂಗ್ರೆಸ್‌ನ ಅಭಿಷೇಕ್ ಸಿಂಘ್ವಿ, ‘ಭಾರತ ವಿರೋಧಿ ಸ್ನೇಹಿತರು’ ಟ್ರುಡೊರನ್ನು ರಕ್ಷಿಸಬಹುದು ಎಂದು ನಾನು ಭಾವಿಸಿದ್ದೇನೆ. ಭಾರತದ ಆಂತರಿಕ ವಿಷಯಗಳಿಗೆ ಮೂಗು ತೂರಿಸುವ ಮೊದಲು ತಮ್ಮ ದೇಶದಲ್ಲಿನ ಕಠಿಣ ಪರಿಸ್ಥಿತಿಗಳ ಬಗ್ಗೆ ಅರಿಯಬೇಕು ಎಂದು ಟ್ವೀಟ್ ಮಾಡಿ ಕುಟುಕಿದ್ದಾರೆ.
Advertisement
Hope #JustinTrudeau's anti-India friends would come up to his rescue. Before poking nose into internal matters of a sovereign nation and a much bigger democracy, never forget that Karma could hit back hard!https://t.co/MbaBzIOK1U
— Abhishek Singhvi (@DrAMSinghvi) January 30, 2022
Advertisement
ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ೨೦೨೦ರಿಂದ ಸತತ ಒಂದು ವರ್ಷಗಳ ಕಾಲ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಶ್ವದ ಅನೇಕ ರಾಜಕೀಯ ಪಕ್ಷಗಳು ಹಾಗೂ ನಾಯಕರು ಬೆಂಬಲ ಸೂಚಿಸಿದ್ದರು. ಈ ವೇಳೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಭಾರತದ ರೈತರ ಪರವಾಗಿ ಮಾತನಾಡಿದ್ದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು
ಕಾಂಗ್ರೆಸ್‌ನಲ್ಲಿ ಸೂಕ್ತ ಗೌರವ ಸಿಗದ ಕಾರಣ ಅಭಿಷೇಕ್ ಮನು ಸಿಂಘ್ವಿ ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿಗಳು ಇತ್ತೀಚೆಗೆ ಹರಿದಾಡಿದ್ದವು. ನಾನು ಪಕ್ಷ ತೊರೆಯುವ ಮಾತು ಸುಳ್ಳು ಎಂದು ಸಿಂಘ್ವಿ ಅಲ್ಲಗಳೆದಿದ್ದರು.