ನವದೆಹಲಿ: ಅಖಿಲ ಭಾರತ ಮಜ್ಲಿಸ್-ಇ ಇಥೆಹಾದುಲ್ ಮುಸಲ್ಮಿನ್(ಎಐಎಂಐಎಂ)ಪಕ್ಷದ ನಾಯಕ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ದೆಹಲಿ ಕೋರ್ಟ್ ಒಪ್ಪಿಸಿದೆ.
ದೆಹಲಿಯ ಅಶೋಕ ರಸ್ತೆಯಲ್ಲಿರುವ ಓವೈಸಿ ಮನೆ ಮೇಲೆ ಈ ಹಿಂದೆ ದಾಳಿ ನಡೆದಿತ್ತು. ಘಟನೆಗೆ ಸಂಬಂಧಿಸದಂತೆ ತನಿಖೆ ನಡೆಸಿ ಐವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳೆಲ್ಲರೂ ಕೂಡ ಮಂಡೋಲಿ ಪ್ರದೇಶದವರಾಗಿದ್ದು, ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದರು ಎಂದು ದೆಹಲಿ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರ ಬೆನ್ನು ತೋರಿಸಿ ಓಡ್ತಿದೆ: ಅಸಾದುದ್ದೀನ್ ಓವೈಸಿ
ಪೊಲೀಸರು ಐವರು ಆರೋಪಿಗಳನ್ನು ದೆಹಲಿ ಕೋರ್ಟ್‍ಗೆ ಹಾಜರುಪಡಿಸಿ, ಇನ್ನಷ್ಟು ವಿಚಾರಣೆಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಕೋರಿದ್ದರು. ವಿಜಾರಣೆ ಬಳಿಕ ವಿಜಯ್, ಸಚಿನ್, ಶಿವಂ ಮತ್ತು ವಿಜಯ್ ಹೆಸರಿನ ನಾಲ್ವರು ಆರೋಪಿಗಳನ್ನು ನ್ಯಾಯಾಲಯ 14ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: 33 ಜನರಿಂದ 9 ತಿಂಗಳ ಕಾಲ 15ರ ಬಾಲಕಿ ಮೇಲೆ ನಿರಂತರ ಅತ್ಯಾಚಾರ