ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ, ಕೇವಲ ಚುನಾವಣಾ ತಂತ್ರವಾಗಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ವಿರುದ್ಧವಾಗಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದೂ ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
Rahul & INC fertilised the ground for Hindutva. Now they’re trying to harvest majoritarianism. Bringing “Hindus to power” is a “secular” agenda in 2021. Wah!
India belongs to all Bharatiyas. Not Hindus alone. India belongs to people of all faiths & also those who have no faith pic.twitter.com/9EfpynChqU
— Asaduddin Owaisi (@asadowaisi) December 12, 2021
Advertisement
ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು. ಇದನ್ನೂ ಓದಿ: ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
Advertisement
#WATCH | “Who is Hindu? The one who embraces everybody, fears nobody, and respects every religion,” says Congress leader Rahul Gandhi at the party’s rally against inflation in Jaipur, Rajasthan pic.twitter.com/OnKjsQOoRJ
— ANI (@ANI) December 12, 2021
Advertisement
ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಈ ಹೇಳಿಕೆ ವಿಚಾರವಾಗಿ ಓವೈಸಿ ಅವರ ಟೀಕಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ