LatestMain PostNational

ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದು: ಓವೈಸಿ

ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ, ಕೇವಲ ಚುನಾವಣಾ ತಂತ್ರವಾಗಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ವಿರುದ್ಧವಾಗಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದೂ ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು. ಇದನ್ನೂ ಓದಿ: ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಈ ಹೇಳಿಕೆ ವಿಚಾರವಾಗಿ ಓವೈಸಿ ಅವರ ಟೀಕಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ

 

Leave a Reply

Your email address will not be published.

Back to top button