ಹೈದರಾಬಾದ್: ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಮುಂದಿನ ದಿನಗಳಲ್ಲಿ ದೊಡ್ಡ ನಾಯಕಿಯಾಗಿ ಬಿಂಬಿಸಲಾಗುವುದು. ಅಷ್ಟೇ ಅಲ್ಲದೇ ದೆಹಲಿಯಲ್ಲಿ ಸಿಎಂ ಅಭ್ಯರ್ಥಿಯನ್ನಾಗಿಯೂ ಘೋಷಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಇದರ ಜೊತೆಗೆ ಮುಂಬರುವ 6-7 ತಿಂಗಳಲ್ಲಿ ನೂಪುರ್ ಶರ್ಮಾ ಅವರನ್ನು ದೊಡ್ಡ ನಾಯಕರನ್ನಾಗಿ ಮಾಡಲಾಗುವುದು ಎಂದು ಕಿಡಿಕಾರಿದರು.
Advertisement
Advertisement
ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಕ್ಕಾಗಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬಂಧಿಸಿ ಭಾರತದ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದರೂ, ಅವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೇ ಮೌನ ವಹಿಸಿದ್ದಾರೆ ಎಂದು ಗುಡುಗಿದರು. ಇದನ್ನೂ ಓದಿ: ಟಿಪ್ಪು ಏನು ಕನ್ನಡದವರಾ? ಪರ್ಷಿಯನ್, ಉರ್ದು ಭಾಷೆ ಪ್ರಚಾರ ಮಾಡಿದವ್ರು: ಅಶೋಕ್
Advertisement
ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಕರೆತಂದು ಕಾನೂನಾತ್ಮಕ ಕ್ರಮಕೈಗೊಳ್ಳಬೇಕು ಎಂದು ತೆಲಂಗಾಣ ಸಿಎಂ ಕೆಸಿಆರ್‌ಗೆ ಒತ್ತಾಯಿಸಿದರು. ಇದನ್ನೂ ಓದಿ: ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..