ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಪ್ರಮಾಣ ವಚನದ ಕೊನೆಯಲ್ಲಿ “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ “ಎಂದು ಹೇಳಿದ್ದು ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.
ಓವೈಸಿ ಹೇಳಿಕೆಗೆ ಕೂಡಲೇ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ ಆ ಪದವನ್ನು ಕಡತದಿಂದ ತೆಗೆದು ಹಾಕುವಂತೆ ಆಗ್ರಹಿಸಿದರು. ಈ ಮನವಿಯನ್ನು ಪುರಸ್ಕರಿಸಿದ ಸ್ಪೀಕರ್ ಓವೈಸಿ ಹೇಳಿದ ಪದಗಳನ್ನು ಕಡತದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದರು.