ನವದೆಹಲಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಒಂದು ಅಥವಾ ಎರಡು ಪಕ್ಷಗಳೊಂದಿಗೆ ತಮ್ಮ ಪಕ್ಷ ಮಾತುಕತೆ ನಡೆಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ.
Advertisement
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸುವ ಭರವಸೆಯನ್ನು ನೀಡಿದರು. ಜೊತೆಗೆ ನಮ್ಮ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಒಂದು ಅಥವಾ ಎರಡು ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮೈತ್ರಿ ಮಾಡಿಕೊಳ್ಳಬೇಕೇ, ಬೇಡವೇ ಎನ್ನುವುದರ ಬಗ್ಗೆ ಸಮಯ ನಿರ್ಧರಿಸುತ್ತದೆ. ನಾವು ಚುನಾವಣೆಯಲ್ಲಿ ಗೆಲುವು ಸಾಧಿಸುವ ತವಕದಲ್ಲಿ ಇದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ನವಜೋತ್ ಸಿಧುರನ್ನು ತರಾಟೆಗೆ ತೆಗೆದುಕೊಂಡ ಗೌತಮ್ ಗಂಭೀರ್
Advertisement
Advertisement
ಅಸೆಂಬ್ಲಿ ಚುನಾವಣೆಯಲ್ಲಿ ಎಐಎಂಐಎಂ ಅಭ್ಯರ್ಥಿಗಳು ಮುಸ್ಲಿಂ ಸಮುದಾಯವೊಂದೇ ಅಲ್ಲದೇ ಎಲ್ಲ ಸಮುದಾಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಪ್ರಗತಿಶೀಲ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಅವರೊಂದಿಗೆ ತಮ್ಮ ಪಕ್ಷ ಮಾತುಕತೆ ನಡೆಸುತ್ತಿದೆ ಎಂದು ಈ ಹಿಂದೆ ಓವೈಸಿ ಹೇಳಿದ್ದರು. ಆಜಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್
Advertisement
ಶಿವಪಾಲ್ ಯಾದವ್ ಹಾಗೂ ಚಂದ್ರಶೇಖರ್ ಜೊತೆ ಮಾತುಕತೆ ನಡೆಸಿದ್ದೇವೆ. ಇತರ ಪಕ್ಷಗಳೊಂದಿಗೂ ಮಾತುಕತೆ ನಡೆಸುವುದಾಗಿ ಓವೈಸಿ ಅ.28ರಂದು ತಿಳಿಸಿದ್ದರು. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗಳಿಸುವ ಮೂಲಕ ಜಯ ಸಾಧಿಸಿತ್ತು. ಹಿಂದಿನ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ 38 ಸ್ಥಾನಗಳನ್ನು, ಸಮಾಜವಾದಿ ಪಕ್ಷ 47 ಸ್ಥಾನಗಳನ್ನು ಗಳಿಸಿತ್ತು. ಬಿಎಸ್‍ಪಿ 19 ಮತ್ತು ಕಾಂಗ್ರೆಸ್ 7 ಸ್ಥಾನಗಳನ್ನು ಪಡೆದಿದೆ.