ಜೋಧಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನ ಆಸಾರಾಮ್ ಬಾಪು ತಮ್ಮ ಜೀವಾವಧಿ ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ರಾಜಸ್ಥಾನ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ.
ಸ್ವಘೋಷಿತ ದೇವಮಾನವನೆಂದೇ ಹೆಸರು ಮಾಡಿದ್ದ ರಾಜಸ್ಥಾನದ ಆಸಾರಾಮ್ ಬಾಪು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸುಧೀರ್ಘ ವಿಚಾರಣೆ ನಡೆಸಿದ ಜೋಧಪುರ ನ್ಯಾಯಾಲಯ ಏಪ್ರಿಲ್ 25 ರಂದು ಜೀವಾವಧಿ ಶಿಕ್ಷೆ ಘೋಷಿಸಿತ್ತು.
Advertisement
ಜೋಧಪುರ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ಆಸಾರಾಮ್ ಬಾಪು ಜುಲೈ 2 ರಂದು ಹೈಕೋರ್ಟ್‍ಗೆ ಮೆಟ್ಟಿಲೇರಿದ್ದರು. ಆದರೆ ಇಲ್ಲಿಯವರೆಗೂ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ರಾಜಸ್ಥಾನದ ರಾಜ್ಯಪಾಲರ ಮೊರೆ ಹೋಗಿದ್ದಾರೆ.
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರು ಜೋಧಪುರ್ ಬಂಧಿಖಾನೆ ವರಿಷ್ಠಾಧಿಕಾರಿಯಾದ ಕೈಲಾಶ್ ತ್ರಿವೇದಿಯವರು, ಆಸಾರಾಮ್ ಬಾಪುರವರು ತಮ್ಮ ಶಿಕ್ಷೆಯ ಪ್ರಮಾಣವನ್ನು ಕಡಿಮೆಮಾಡುವಂತೆ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ ವಯೋಸಹಜ ಜೀವನ ನಡೆಸುತ್ತಿರುವ ನನಗೆ ನೀಡಿರುವ ಜೀವಾವಧಿ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.
Advertisement
ಮಧ್ಯಪ್ರದೇಶದ ಚಿಂದ್ವಾರಾದಲ್ಲಿರುವ ಆಶ್ರಮದಲ್ಲಿ ಓದುತ್ತಿದ್ದ 16 ವರ್ಷದ ಬಾಲಕಿಯನ್ನು ಜೋಧಪುರದ ಬಳಿಯಿರುವ ಆಶ್ರಮದಲ್ಲಿ ಆಸಾರಾಮ ಬಾಪು 2013ರ ಆಗಸ್ಟ್ 15 ರಂದು ಅತ್ಯಾಚಾರ ಎಸಗಿದ್ದಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv