ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ- ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ

Public TV
1 Min Read
asram jodhpur

ಜೈಪುರ: 16 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್‍ಪುರ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಐದು ವರ್ಷದ ಹಿಂದಿನ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಮಧುಸೂದನ್ ಶರ್ಮಾ ಅವರು ಅಸಾರಾಂ ಬಾಪು, ಶಿಲ್ಪಿ ಹಾಗೂ ಶರದ್ ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಶಿವ, ಪ್ರಕಾಶ್ ರನ್ನು ಖುಲಾಸೆಗೊಳಿಸಲಾಗಿದೆ. ಸದ್ಯ ದೇವಮಾನವನಿಗೆ ಜೀವವಾಧಿ ಶಿಕ್ಷೆ ಹಾಗೂ ಇನ್ನಿಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೇಸ್ ಹಿಸ್ಟರಿ:
2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‍ಪುರದ ಬಾಲಕಿ ದೂರು ನೀಡಿದ್ದಳು. ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‍ನಲ್ಲಿ ಅಸಾರಾಂ ನನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. 2013ರ ಸೆಪ್ಟೆಂಬರ್ 2ರಿಂದ ಅಸಾರಾಂ ನ್ಯಾಯಾಂಗ ವಶದಲ್ಲಿದ್ದನು. ಪ್ರಕರಣಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 7ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಸದ್ಯ ಬಾಬಾ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಹಾಗೂ ಹರ್ಯಾಣ ಸಹಿತ ಮೂರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಹುದೆಂಬ ಅನುಮಾನದಿಂದ ಏಪ್ರಿಲ್ 30ರವರೆಗೆ ಜೋಧ್‍ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *