ನೆಲಮಂಗಲ: ಭ್ರೂಣ ಹತ್ಯೆ ಮಾಹಾ ಪಾಪದ ಕೆಲಸ ಈ ನಡುವೆ ರಾಜ್ಯದಲ್ಲಿ ಮತ್ತೆ ಭ್ರೂಣ ಹತ್ಯೆ ಕೇಸ್ ಬೆಳಕಿಗೆ ಬಂದಿದ್ದು, ನಾಗರಿಕ ಸಮಯದಲ್ಲಿ ಆತಂಕ ಪಡುವ ರೀತಿಯಲ್ಲಿ ಪ್ರಕರಣ ಸಂಭವಿಸಿದೆ.
ಬೆಂಗಳೂರು ಹೊರವಲಯ ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಿಷೇಧ ಕಾಯಿದೆ ಉಲಂಘನೆ ಆರೋಪ ಕೇಳಿ ಬಂದಿದೆ. ಏಕಾಏಕಿ ಜಿಲ್ಲಾ ಕುಟುಂಬ ಕಲ್ಯಾಣ ಆರೋಗ್ಯಧಿಕಾಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ದಾಖಲೆ ಒದಗಿಸದ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯ ರವಿಕುಮಾರ್‍ಗೆ ನೋಟಿಸ್ ನೀಡಲಾಗಿದೆ.
2021 ನೇ ಸಾಲಿನಿಂದ ಇಲ್ಲಿಯವರೆಗೂ 74 ಗರ್ಭಪಾತ ನಡೆಸಿರುವ ಬಗ್ಗೆ ಮಾಹಿತಿ ಇದ್ದು, 32 ಭ್ರೂಣ ಹತ್ಯೆ ಬಗ್ಗೆ ಸೂಕ್ತ ದಾಖಲಾತಿ ನೀಡದ ಹಿನ್ನೆಲೆ ದೂರು ನೀಡಲಾಗಿದೆ. ರವಿಕುಮಾರ್ ಆಸ್ಪತ್ರೆಯಲ್ಲಿ ಸ್ಕಾನಿಂಗ್ ಮಿಷನ್ ಇಲ್ಲದೆ ಆಸ್ಪತ್ರೆ ಚಾಲ್ತಿಯಲ್ಲಿತ್ತು ಅನ್ನೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಸ್ಕರಣೆ ಮಾಡಿದ ನೀರು ಮರುಬಳಕೆಗೆ ಶೀಘ್ರವೇ ಆದೇಶ: ಈಶ್ವರ್ ಖಂಡ್ರೆ
ಫೋನ್ ಸ್ವಿಚ್ಡ್ ಆಫ್: ಈ ಭ್ರೂಣ ಹತ್ಯೆ ಕೇಸ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವೈದ್ಯ ರವಿಕುಮಾರ್ ಫೋನ್ ಸ್ವಿಚ್ ಆಫ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಇಂತಹ ಪ್ರಕರಣಗಳನ್ನ ಸೂಕ್ತ ಕಾಲಕಾಲದಲ್ಲಿ ಪತ್ತೆ ಹಚ್ಚುವಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳ ನಡೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಅಧಿಕಾರಿಗಳು ಕರ್ತವ್ಯ ಪಾಲಿಸಿ ಕೆಲಸ ಮಾಡಿದ್ರೆ ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕಬಹುದಿತ್ತು ಅನ್ನೋದು ಸ್ಥಳೀಯರ ಮಾತಾಗಿದೆ.