ಮಂಗಳೂರು: ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯಲ್ಲಿ ನಡೆದಿದೆ.
ಕುಕ್ಕಿಪಾಡಿಯ ಶ್ರೀಮತಿ ಎಂಬಾಕೆ ಹಲ್ಲೆಗೆ ಯತ್ನಿಸಿದ್ದು, ಮನೆಯ ಮುಂದೆ ಜನ ಸೇರಿದ್ದನ್ನ ಪ್ರಶ್ನಿಸಿದ್ದಕ್ಕೆ ಪೊರಕೆಯಲ್ಲಿ ಆಶಾ ಕಾರ್ಯಕರ್ತೆ ಪುಷ್ಪಲತಾ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ.
ಶ್ರೀಮತಿಯ ಪತಿ ವಿಶ್ವನಾಥ್ ಮನೆಯಲ್ಲಿ ಮಂತ್ರವಾದಿ ಕಾರ್ಯ ನಡೆಸುತ್ತಿದ್ದನು. ಹೀಗಾಗಿ ಇವರ ಮನೆಗೆ ಹತ್ತಾರು ಜನರು ಬರುತ್ತಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನ ಸೇರಿದ್ದನ್ನ ಆಶಾ ಕಾರ್ಯಕರ್ತೆ ಪುಷ್ಪಲತಾ ಪ್ರಶ್ನಿಸಿದ್ದಾರೆ. ಆಗ ಶ್ರೀಮತಿ ಪೊರಕೆಯಿಂದ ಆಶಾ ಕಾರ್ಯಕರ್ತೆ ಪುಷ್ಪಲತಾ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ.
ಘಟನೆಯ ಬಳಿಕ ಕುಕ್ಕಿಪಾಡಿ ಪಂಚಾಯತ್ ಸದಸ್ಯರಾದ ಯೋಗೀಶ್ ಆಚಾರ್ಯ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಸದಸ್ಯರ ಮೇಲೂ ಹಲ್ಲೆ ಯತ್ನಿಸಲಾಗಿದೆ. ಅಷ್ಟೇ ಅಲ್ಲದೇ ಮಹಿಳೆ ಅವಾಚ್ಯವಾಗಿ ನಿಂದಿಸಿದ್ದಾಳೆ.
ಈ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.