ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ಆಶಾ ಕಾರ್ಯಕರ್ತೆಯರ (ASHA workers) ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಈಗ ಹೋರಾಟ ಕೈಬಿಡುವ ಸಾಧ್ಯತೆಯಿದ್ದು, ಈ ಬಗ್ಗೆ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಘೋಷಣೆ ಮಾಡಲಿದ್ದಾರೆ.

