ಬೀದರ್: ಅಜ್ಜಿ ಲಸಿಕೆ ಪಡೆಯದೆ ಹೈಡ್ರಾಮಾ ಮಾಡುತ್ತಿದ್ದಾಗ ಅವರ ಕೈಗಳನ್ನು ಹಿಡಿದು ಆರೋಗ್ಯ ಸಿಬ್ಬಂದಿ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿರುವ ಘಟನೆ ಬೀದರ್ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಪರ್ತಾಪೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಸಿಕೆ ಪಡೆಯಲು ಅಜ್ಜಿ ಒಲ್ಲೆ ಎಂದರೂ ಬಿಡದ ಆರೋಗ್ಯ ಸಿಬ್ಬಂದಿ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement 2
- Advertisement 3
ಅಜ್ಜಿ ಲಸಿಕೆ ಪಡೆಯುತ್ತಿಲ್ಲಾ ಎಂಬ ಮಾಹಿತಿ ಪಡೆದ ಆಶಾ ಕಾರ್ಯಕರ್ತೆರು ಹಾಗೂ ಆರೋಗ್ಯ ಸಿಬ್ಬಂದಿ ಲಸಿಕೆ ನೀಡಲು ಅಜ್ಜಿ ಮನೆಗೆ ಭೇಟಿ ನೀಡಿದರು. ಈ ವೇಳೆ ಎಷ್ಟೇ ಮನವೊಲಿಸಿದರೂ, ಅಜ್ಜಿ ಲಸಿಕೆ ಪಡೆಯಲು ಹಿಂದೇಟು ಹಾಕಿದಾಗ ಒತ್ತಾಯವಾಗಿ ಲಸಿಕೆ ನೀಡಿದ್ದಾರೆ. ಇದನ್ನೂ ಓದಿ: ಅಖಿಲೇಶ್ ಯಾದವ್ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್
- Advertisement 4
ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾಗೆ ಸಂಜೀವಿನಿಯಾದ ಲಸಿಕೆ ಪಡೆಯಲು ಬೀದರ್ ಜಿಲ್ಲೆಯ ಗ್ರಾಮೀಣ ಭಾಗದ ಜನರು ಇನ್ನೂ ಹಿಂದೇಟು ಹಾಕುತ್ತಿರುವುದು ಆರೋಗ್ಯ ಸಿಬ್ಬಂದಿಯನ್ನು ಹೈರಾಣಾಗುವಂತೆ ಮಾಡಿದೆ. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಸಿಕ್ತು ಗುಡ್ ನ್ಯೂಸ್ – ಪ್ರಾಥಮಿಕ ಅಧ್ಯಯನ ವರದಿಗಳು ಬಹಿರಂಗ