ಬೆಂಗಳೂರು: ನಿಗದಿತ ವೇತನ, ಸಹಾಯಧನ ಮತ್ತು ಸೇವಾಭದ್ರತೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರಿದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸಾವಿರಾರು ಕಾರ್ಯಕರ್ತೆಯರು ರಾತ್ರಿಯಿಂದ ಅಲ್ಲೇ ಮಲಗಿ ಪ್ರತಿಭಟನೆ ನಡೆಸ್ತಿದ್ದಾರೆ. ಗುರುವರದಂದು ಪ್ರತಿಭಟನಾ ಸ್ಥಳಕ್ಕೆ ಬಂದ ಆರೊಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, 5 ಸಾವಿರ ಸಹಾಯಧನ ನೀಡಲು ಒಪ್ಪಿಗೆ ನೀಡಿ ಆದೇಶ ಹೊರಡಿಸಿದ್ರು. ಆದ್ರೆ ಆಶಾ ಕಾರ್ಯಕರ್ತೆಯರು 6 ಸಾವಿರಕ್ಕೆ ಪಟ್ಟು ಹಿಡಿದ್ರು.
Advertisement
Advertisement
ಸ್ವತಃ ಆರೋಗ್ಯ ಸಚಿವರೇ ಬಂದು ಸಂಧಾನ ನಡೆಸಿದ್ರೂ ಪ್ರಯೋಜನವಾಗಿಲ್ಲ. ಬಳಿಕ ಆರೋಗ್ಯ ಸಚಿವ ರಮೇಶ್ ಕುಮಾರ್ ಸಹ ಭೇಟಿ ನೀಡಿ ಚರ್ಚೆ ನಡೆಸಿದ್ರು. ಇವತ್ತು ಮಧ್ಯಾಹ್ನ 3 ಗಂಟೆಗೆ ಆರೋಗ್ಯ ಸಚಿವರು ಸಭೆ ಕರೆದಿದ್ದಾರೆ.