– ಉಚಿತ ಬಸ್ ಗಳ ವ್ಯವಸ್ಥೆ
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯುತ್ತಿದೆ. ಅದರಲ್ಲೂ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢದ ಪ್ರಥಮ ಶುಕ್ರವಾರದ ಪೂಜೆ ಅದ್ಧೂರಿಯಾಗಿ ನಡೆಯುತ್ತಿದೆ.
Advertisement
ಈಗಾಗಲೇ ಚಾಮುಂಡಿ ಬೆಟ್ಟದಲ್ಲಿ ಮೊದಲನೇ ಆಷಾಢ ಶುಕ್ರವಾರದ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ದೇವಾಲಯದ ಒಳ, ಹೊರಾವರಣ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದೆ. ನಸುಕಿನಲ್ಲೇ ದೇವಾಲಯದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಹೀಗಾಗಿ ನೂಕು ನುಗ್ಗಲು ಉಂಟಾಗದಂತೆ ವ್ಯಾಪಕ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
Advertisement
Advertisement
ಆಷಾಢ ಮಾಸದ ಒಟ್ಟು 5 ಶುಕ್ರವಾರಗಳಲ್ಲೂ ಚಾಮುಂಡಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ನಾಡಿನ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು, ಜನಪ್ರತಿನಿಧಿಗಳು, ಸಿನಿಮಾ ನಟರು ಪ್ರತಿ ಆಷಾಢ ಶುಕ್ರವಾರದಲ್ಲೂ ದೇವಿಯ ದರ್ಶನ ಪಡೆಯುತ್ತಾರೆ. ಹೀಗಾಗಿ ಮುಂಜಾನೆಯಿಂದ ರಾತ್ರಿವರೆಗೂ ದೇವಸ್ಥಾನದ ಬಾಗಿಲು ತೆರೆದಿರುತ್ತದೆ.
Advertisement
ಹಾಗೆಯೇ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು, ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲಾ ರೀತಿಯ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ದೇವಿಯ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಚಾಮುಂಡಿ ಬೆಟ್ಟದ ಕೆಳಗಿನ ಲಲಿತ ಮಹಲ್ ಹೆಲಿಪ್ಯಾಡ್‍ನಿಂದ ಉಚಿತ ಬಸ್‍ಗಳ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಹೀಗಾಗಿ ಭಕ್ತರು ಲಲಿತಮಹಲ್ ಹೆಲಿಪ್ಯಾಡ್‍ನಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಉಚಿತವಾಗಿ ಸೇವೆಯಲ್ಲಿರುವ ನಗರ ಸಾರಿಗೆ ಬಸ್‍ಗಳಲ್ಲಿ ಬೆಟ್ಟಕ್ಕೆ ತೆರಳಬೇಕಿದೆ.