ಲಕ್ನೋ: ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಮಿಶ್ರಾ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಲಖಿಂಪುರ್ ಜೈಲಿನ ಅಧಿಕಾರಿಗಳು ಆಶಿಶ್ ಮಿಶ್ರಾ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಎರಡು ಬಾರಿ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗಲೂ ಡೆಂಗ್ಯೂ ಇರುವುದು ದೃಢಪಟ್ಟಿದೆ.
Advertisement
Advertisement
ಭದ್ರತೆ ದೃಷ್ಟಿಯಿಂದ ಆಸ್ಪತ್ರೆ ಹೊರಗಡೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜಿಲ್ಲಾಸ್ಪತ್ರೆಯು ಮೂರನೇ ಬಾರಿಯ ರಕ್ತದ ಮಾದರಿ ಪರೀಕ್ಷೆ ವರದಿಗಾಗಿ ಕಾಯುತ್ತಿದೆ.
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಲಖಿಂಪುರ್ ಖೇರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಶೈಲೇಶ್ ಭಾತ್‍ನಗರ್, ಆಶಿಶ್ ಮಿಶ್ರಾ ಅವರ ರಕ್ತದ ಮಾದರಿಯನ್ನು ಮೂರನೇ ಬಾರಿಗೆ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ವರದಿ ಆಧರಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯತೆ ಕುರಿತು ತಜ್ಞರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.
Advertisement
ಆಶಿಶ್ ಮಿಶ್ರಾ ಅವರ ವಕೀಲ ಅವದೀಶ್ ಕುಮಾರ್ ಸಿಂಗ್ ಮಾತನಾಡಿ, ಕಳೆದ ಮೂರು ದಿನಗಳಿಂದ ಮಿಶ್ರಾ ಅವರು ಜ್ವರದಿಂದ ಬಳಲುತ್ತಿದ್ದರು. ಭಾನುವಾರ ಪರೀಕ್ಷೆಗಾಗಿ ಅವರ ರಕ್ತದ ಮಾದರಿ ಸಂಗ್ರಹಿಸಲಾಗಿತ್ತು. ವರದಿ ಸ್ವೀಕರಿಸಿದ ನಂತರ ಮಿಶ್ರಾ ಅವರನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು’ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಂಪತಿಯ ಹನಿ ಟ್ರ್ಯಾಪ್ ಬಲೆಗೆ ಬಿದ್ದ 300 ಮಂದಿ- ಒಂದೇ ವರ್ಷದಲ್ಲಿ 20 ಕೋಟಿ ಸುಲಿಗೆ!
ಲಖಿಂಪುರ್ ಖೇರಿ ಅ.3ರಂದು ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇದನ್ನೂ ಓದಿ: ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ!