ನವದೆಹಲಿ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬದ್ಧರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಶೋಕ್ ಗೆಹ್ಲೋಟ್ ಅವರಿಗೆ ಪಕ್ಷ ನಾಯಕತ್ವದ ಜವಾಬ್ದಾರಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
Advertisement
Advertisement
ಈ ಮೂಲಕ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ರಾಜಸ್ಥಾನದ ಮುಖ್ಯಮಂತ್ರಿ ಜವಾಬ್ದಾರಿಯ್ನು ನಿಭಾಯಿಸಿಕೊಂಡು ಹೋಗಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರು ಪಕ್ಷದ ಅಧ್ಯಕ್ಷ ಸ್ಥಾನ ಹಾಗೂ ಮುಖ್ಯಮಂತ್ರಿ ಜವಾಬ್ದಾರಿಯನ್ನು ಒಟ್ಟಿಗೆ ನಿರ್ವಹಿಸಿದ್ದಾರೆ. ಹೀಗಾಗಿ ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಜವಾಬ್ದಾರಿಯ ಜೊತೆಗೆ ಕಾಂಗ್ರೆಸ್ ನಾಯಕ ಸ್ಥಾನವನ್ನು ನಿರ್ವಹಿಸಬಹುದು ಎಂಬ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
Advertisement
Advertisement
ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಸೋಲಿನ ಜವಾಬ್ದಾರಿ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಹಿರಿಯ ನಾಯಕರು ರಾಜೀನಾಮೆಯನ್ನು ತಿರಸ್ಕರಿಸಿದ್ದರು. ಆದರೂ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡುವ ವಿಚಾರದಿಂದ ಹಿಂದೆ ಸರಿಯುತ್ತಿಲ್ಲ. ಇದರಿಂದಾಗಿ ಪಕ್ಷದ ಹಿರಿಯ ನಾಯಕರು ಸೂಕ್ತ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]