ಸುನೀಲ್ ಪುರಾಣಿಕ್ ಅವರಿಂದ ತೆರುವಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಲಾಗಿದ್ದು, ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ (Ashok Kashyap) ಅವರನ್ನು ನೇಮಕ ಮಾಡಿ, ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ (Academy), ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.
Advertisement
ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿರುವ ಅಶೋಕ್ ಕಶ್ಯಪ್, ಲಿಫ್ಟ್ ಕೊಡ್ಲಾ, ಧ್ವಜ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿ, ರಾಷ್ಟ್ರ ಪ್ರಶಸ್ತಿ ಪಡೆದ ತಲೆದಂಡ ಸಿನಿಮಾಗೆ ಅಶೋಕ್ ಕಶ್ಯಪ್ ಅವರೇ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ ಎನ್ನುವುದು ವಿಶೇಷ. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ವಿಜಯ್ ದೇವರಕೊಂಡ- ರಶ್ಮಿಕಾ
Advertisement
Advertisement
ಜಗ್ಗೇಶ್, ಉಪೇಂದ್ರ, ಪ್ರಿಯಾಮಣಿ ಸೇರಿದಂತೆ ಕನ್ನಡದ ಅನೇಕ ಸ್ಟಾರ್ ನಟರ ಚಿತ್ರಗಳಿಗೆ ಕ್ಯಾಮೆರಾ ಕೆಲಸ ಮಾಡಿದ ಹೆಗ್ಗಳಿಕೆ ಅಶೋಕ್ ಅವರದ್ದು. ಅಲ್ಲದೇ ಅನೇಕ ಧಾರಾವಾಹಿಗಳಿಗೆ ಕೆಲಸ ಕೂಡ ಮಾಡಿದ್ದಾರೆ. ಇವರದ್ದೇ ನಿರ್ಮಾಣ ಸಂಸ್ಥೆಯಿಂದ ಧಾರಾವಾಹಿಗಳು ಕೂಡ ನಿರ್ಮಾಣವಾಗಿವೆ. ಸಿನಿಮಾಟೋಗ್ರಾಫರ್, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿದ್ದಾರೆ. ಭಾರತೀಯ ಸಿನಿಮಾ ರಂಗದ ಅತ್ಯುತ್ತಮ ಸಿನಿಮಾಟೋಗ್ರಾಫರ್ ಗಳಲ್ಲಿ ಇವರು ಒಬ್ಬರಾಗಿದ್ದಾರೆ.