ಬೀದರ್: ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ನಾಮಪತ್ರ ಅಂಗೀಕಾರ ಮಾಡದಂತೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಅಶೋಕ್ ಖೇಣಿ ಭಾರತದ ಪ್ರಜೆ ಅಲ್ಲ. ಅವರು ಅಮೆರಿಕದ ಪ್ರಜೆಯಾಗಿದ್ದು, ಸರ್ಕಾರದ ಹಲವು ಯೋಜನೆಗಳಲ್ಲಿ ಗುತ್ತಿಗೆ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
Advertisement
ದೂರು ದಾಖಲಾದ ಹಿನ್ನೆಲೆಯಲ್ಲಿ ಖೇಣಿ ನಾಮಪತ್ರ ಅಂಗೀಕಾರಕ್ಕೆ ಆಯೋಗದ ಅಧಿಕಾರಿಗಳು ತಡೆ ನೀಡಿದ್ದಾರೆ. ದೂರಿನ ಸಂಬಂಧ ಚುನಾವಣಾ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
Advertisement
2013ರಲ್ಲಿ ಅಶೋಕ್ ಖೇಣಿ ಕರ್ನಾಟಕ ಮಕ್ಕಳ ಪಕ್ಷದ ಅಡಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕಣಕ್ಕೆ ಇಳಿದು ಗೆದ್ದಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳಿಗೆ ವೋಟ್ ಹಾಕಿದ್ದ ಖೇಣಿ ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಸೇರಿದ್ದರು. ಪ್ರಸ್ತುತ ಖೇಣಿ ಅವರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದೆ.